ಹಾವೇರಿ: ಜಿಲ್ಲೆಯ ಬೆನಕನಹಳ್ಳಿ ಗ್ರಾಮದಲ್ಲಿ ಒಡಹುಟ್ಟಿದ ಅಣ್ಣನೇ ತಮ್ಮನನ್ನು ಕೊಲೆ ಮಾಡಿರುವ ಅಮಾನುಷ ಘಟನೆ ನಡೆದಿದೆ. ಕೋಟೆಪ್ಪ ಮಟ್ಟೆಣ್ಣನವರ (28) ಕೊಲೆಯಾದ ವ್ಯಕ್ತಿ.ಅಣ್ಣ ಮಂಜಪ್ಪನಿಂದ ಕೋಟೆಪ್ಪನ ಕೊಲೆಯಾಗಿದ್ದು, ಮನೆಯಲ್ಲೇ ತಮ್ಮನನ್ನ ಹೊಡೆದು ಮಂಜಪ್ಪ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಆರೋಪಿ ಮಂಜಪ್ಪನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಹಾವೇರಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತಂತೆ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.