ETV Bharat / state

ಪೊಲೀಸ್‌ ಸಿಬ್ಬಂದಿಗೆ ಕೊರೊನಾ ದೃಢ: ಬ್ಯಾಡಗಿ ಪೊಲೀಸ್ ಠಾಣೆ ಸೀಲ್‌ಡೌನ್ - Corona virus found in police

ಕಾನ್ಸ್‌ಟೆಬಲ್ ಒಬ್ಬರಿಗೆ ಸೋಮವಾರ ಕೊರೊನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಬ್ಯಾಡಗಿ ಪೊಲೀಸ್ ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿದೆ.

Police station
Police station
author img

By

Published : Jun 17, 2020, 10:16 AM IST

ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾನ್ಸ್‌ಟೆಬಲ್ ಒಬ್ಬರಿಗೆ ಸೋಮವಾರ ಕೊರೊನಾ ವೈರಸ್ ದೃಢಪಟ್ಟಿದೆ. ಹೀಗಾಗಿ ಬ್ಯಾಡಗಿ ಪೊಲೀಸ್ ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿದೆ.

ಪೊಲೀಸ್ ಕಾನ್ಸ್‌ಟೆಬಲ್‌ಗೆ ಕೊರೊನಾ ಕಾಣಿಸಿದ್ದರಿಂದ ಅವರು ಕಾರ್ಯ ನಿರ್ವಹಿಸಿರುವ ಬ್ಯಾಡಗಿ ಪೊಲೀಸ್ ಸ್ಟೇಷನ್ ಅನ್ನು ಸೀಲ್ ಡೌನ್ ಮಾಡಲಾಗಿದೆ. ಈ ಮಧ್ಯೆ ಮಂಗಳವಾರ ಠಾಣೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಅಲ್ಲದೇ ಕಾನ್ಸ್‌ಟೆಬಲ್ ಬಳಸಿದ ಪೊಲೀಸ್ ಜೀಪ್‌ಗೂ ಸಹ ಸ್ಯಾನಿಟೈಜರ್ ಸಿಂಪಡಿಸಲಾಯಿತು.

ಠಾಣೆಯ ಪಿಎಸ್ಐ ಮಾಲತೇಶ್ ಸೇರಿದಂತೆ ಇತರೆ ಪೊಲೀಸ್ ಸಿಬ್ಬಂದಿಯನ್ನು ಈಗಾಗಲೇ ಹೋಮ್ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.