ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬಿದ್ದಿದ್ದ ಅಪರಿಚಿತ ಮಹಿಳೆಯನ್ನ ತಾಲೂಕು ಆಸ್ಪತ್ರೆಗೆ ಸೇರಿಸಿ ಬ್ಯಾಡಗಿ ಪಿಎಸ್ಐ ಮಹಾಂತೇಶ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.
ಅಸ್ವಸ್ಥಗೊಂಡು ರಸ್ತೆಯಲ್ಲಿ ಬಿದ್ದಿದ್ದ ಮಹಿಳೆಯನ್ನು ಕಂಡು ದಾರಿಹೋಕರೊಬ್ಬರು ನೀಡಿದ ಮಾಹಿತಿಯಿಂದ ತಕ್ಷಣ ಪಿಎಸ್ಐ ಸ್ಥಳಕ್ಕೆ ಧಾವಿಸಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ತಲೆಗೆ ಪೆಟ್ಟಾದಂತೆ ಕಾಣುತ್ತಿದ್ದ ಮಹಿಳೆ ಮಾತನಾಡಲು ಬಾರದೆ ಅಸ್ವಸ್ಥಗೊಂಡಿದ್ದಳು.
ರಸ್ತೆಯಲ್ಲಿ ಸಾಕಷ್ಟು ವಾಹನಗಳು ಸಂಚರಿಸುವುದರಿಂದ ವಾಹನಗಳು ಹಾಯ್ದು ಅನಾಹುತ ಸಂಭವಿಸುವ ಸಾಧ್ಯತೆಗಳಿದ್ದವು. ಹೀಗಾಗಿ ಪಿಎಸ್ಐ ಮಹಾಂತೇಶರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.