ಹಾನಗಲ್: ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಯ ಶಾಲಾ ಕೊಠಡಿಯಲ್ಲಿ ಕಾರ್ಮಿಕರ ಆಹಾರ ಪದಾರ್ಥಗಳ ಕಿಟ್ಗಳು ಪತ್ತೆಯಾಗಿವೆ.
ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ಜನತಾ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಟ್ಗಳು ಪತ್ತೆಯಾಗಿವೆ. ಲಾಕ್ಡೌನ್ ಸಂದರ್ಭದಲ್ಲಿ ಕೆಲಸವಿಲ್ಲದ ಕಾರ್ಮಿಕರಿಗೆ ಸರ್ಕಾರದಿಂದ ಬಂದಿದ್ದ ಕಿಟ್ಗಳನ್ನು ಸಂಗ್ರಹ ಮಾಡಲಾಗಿದೆ ಎನ್ನಲಾಗಿದೆ.
ಸ್ಥಳಕ್ಕೆ ಆಹಾರ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹನ್ನೆರಡು ಕಿಟ್ಗಳನ್ನ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಅನಧಿಕೃತವಾಗಿ ಸಂಗ್ರಹ ಆಗಿದ್ದರ ಹಿಂದೆ ಅಧಿಕಾರಿಗಳ ಕೈವಾಡವಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.