ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ನಡೆದ ರಸ್ತೆ ಅಪಘಾತದಲ್ಲಿ ವೈದ್ಯೆಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಶಿರಾ ಮೂಲದ ವೈದ್ಯೆ ವರ್ಣಿತಾ(28) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವೈದ್ಯೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಈ ಕುರಿತಂತೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.