ಹಾವೇರಿ: ಜಿಲ್ಲೆಯ ಶಿಗ್ಗಾಂವಿ ನ್ಯಾಯಾಲಯ ಆವರಣದಲ್ಲಿ ನಡೆದ ವಕೀಲರ ಸಂಘದ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು. ಈ ವೇಳೆ ಶಾಸಕಾಂಗಕ್ಕಿಂತ ನ್ಯಾಯಾಂಗ ಶ್ರೇಷ್ಠ ಎಂಬುದನ್ನು ತೋರಿಸಿ ಸರಳತೆ ಮೆರೆದರು.
ಕಟ್ಟಡದ ಗುದ್ದಲಿ ಪೂಜೆ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಚಿನ್ ಮಗದುಮ್ ಬಳಿ ಸಿಎಂ ಮಾತುಕತೆ ನಡೆಸಿದರು. ಸಿಎಂ ಸರಳತೆ ಹಾಗೂ ಪ್ರೀತಿಯ ಮಾತಿಗೆ ಮನಸೋತ ನ್ಯಾಯಮೂರ್ತಿಗಳು ತಾವೇ ಮೊದಲು ಗುದ್ದಲಿ ಪೂಜೆ ಮಾಡಿದರು. ಬಳಿಕ ಸಿಎಂ ಬೊಮ್ಮಾಯಿ ಪೂಜೆ ನೆರವೇರಿಸಿದರು. ಕೃಷಿ ಸಚಿವ ಬಿ.ಸಿ.ಪಾಟೀಲ್, ಹೈಕೋರ್ಟ್ ಹಾಗೂ ಜಿಲ್ಲಾ ನ್ಯಾಯಾಲಯದ ನ್ಯಾಯಮೂರ್ತಿಗಳು ಸೇರಿದಂತೆ ವಕೀಲರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ: ಸಿಎಂ ಕಾರ್ಯಕ್ರಮಕ್ಕೆ ಸ್ವಪಕ್ಷದ ಶಾಸಕ ಓಲೇಕಾರರಿಂದಲೇ ಕಪ್ಪು ಬಾವುಟ ಪ್ರದರ್ಶನಕ್ಕೆ ನಿರ್ಧಾರ