ಬ್ಯಾಡಗಿ/ಹಾವೇರಿ: ಬೈಕ್ ಗೆ ಬೊಲೆರೋ ವಾಹನ ಡಿಕ್ಕಿಯಾಗಿ ಐದು ವರ್ಷದ ಬಾಲಕ ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಬಳಿ ನಡೆದಿದೆ.
ರಾಣೆಬೆನ್ನೂರು ತಾಲೂಕಿನ ಅಸುಂಡಿ ಗ್ರಾಮದ ದಿಲೀಪ್ ಬೀರಪ್ಪ ಪೂಜಾರ(5) ಮೃತ ಬಾಲಕ. ತಂದೆ ಬೀರಪ್ಪ ಪೂಜಾರ ತಮ್ಮ ಬೈಕ್ ನಲ್ಲಿ ಮಗನನ್ನು ಕರೆದುಕೊಂಡು ಹೊಲಕ್ಕೆ ತೆರಳುತ್ತಿದ್ದರು. ಈ ಸಮಯದಲ್ಲಿ ರಾಣೆಬೆನ್ನೂರು ಮಾರ್ಗವಾಗಿ ಬ್ಯಾಡಗಿಗೆ ತೆರಳುತ್ತಿದ್ದ ಬೋಲೆರೋ ವಾಹನ ಡಿಕ್ಕಿಯಾಗಿದೆ. ಇದರಿಂದ ಸ್ಥಳದಲ್ಲಿ ಮಗು ಸಾವನ್ನಪ್ಪಿದೆ, ತಂದೆ ಬೀರಪ್ಪ ಪೂಜಾರ ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.