ETV Bharat / state

ಹಿರೇಕೆರೂರಿಗೆ ಬಿಎಸ್​ವೈ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ - ಹಿರೇಕೆರೂರು ತಾಲೂಕಿನ ದೂದಿಹಳ್ಳಿಗೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಭೇಟಿ

ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ದೂದಿಹಳ್ಳಿಗೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಭೇಟಿ ನೀಡಲಿದ್ದು, ಸರ್ವಜ್ಞ ಏತ ನೀರಾವರಿ ಯೋಜನೆಯಿಂದ ಕೆರೆ ತುಂಬಿಸೋ ಯೋಜನೆ ಹಾಗೂ ಹಿರೇಕೆರೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

CM .B.S Yaduyurappa visite to Hirekerur
ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ
author img

By

Published : Mar 7, 2020, 9:34 AM IST

ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲೂಕಿನ ದೂದಿಹಳ್ಳಿಗೆ ಇಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಭೇಟಿ ನೀಡಲಿದ್ದಾರೆ.

ಹಿರೇಕೆರೂರಿಗೆ ಬಿಎಸ್​ವೈ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ಸರ್ವಜ್ಞ ಏತ ನೀರಾವರಿ ಯೋಜನೆಯಿಂದ ಕೆರೆ ತುಂಬಿಸೋ ಯೋಜನೆ ಹಾಗೂ ಹಿರೇಕೆರೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ ಒಂದು ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಲಿದ್ದು, ಸಿಎಂ ಜೊತೆ ಡಿಸಿಎಂ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ.ಪಾಟೀಲ್​, ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ನಂತರ ಸಿ.ಎಂ ಹೊನ್ನಾಳಿಗೆ ಪ್ರಯಾಣ ಬೆಳೆಸಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.