ಹಾವೇರಿ: ಜಿಲ್ಲೆಯಲ್ಲಿ ನೆರೆಯಿಂದ ತತ್ತರಿಸಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ, ಅಗತ್ಯ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ಸಿಎಂ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸಂಚರಿಸಿದರು. ಈ ವೇಳೆ ಬಿಎಸ್ವೈ, ಶಿವಮೊಗ್ಗ ಮತ್ತು ಹಾವೇರಿ ಜಿಲ್ಲೆಗಳನ್ನು ಪ್ರತ್ಯೇಕಿಸುವ ವರದಾ ನದಿ ಸೇತುವೆ ಮೇಲೆ ನಿಂತು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಗೊಂದಿ ಗ್ರಾಮದ ರೈತ ಮುಖಂಡರು ವಿವಿಧ ಬೇಡಿಕೆ ಈಡೇರಿಸುವಂತೆ ಸಿಎಂಗೆ ಮನವಿ ಸಲ್ಲಿಸಿದರು.
ರೈತರ ಮೇಲೆ ಹಾಕಿರುವ ಕೇಸ್ ವಾಪಸ್ ಪಡೆಯುವುದು, ಬೆಳೆವಿಮೆ ವಿತರಣೆ ಸೇರಿದಂತೆ ಹಲವು ಸಮಸ್ಯೆಗಳನ್ನು ಸಿಎಂ ಗಮನಕ್ಕೆ ತರಲಾಯಿತು. ಆಗ ತಕ್ಷಣವೇ ಅಧಿಕಾರಿಗಳನ್ನು ಕರೆದು ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿಗಳು ಆದೇಶಿಸಿದರು.