ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹಿರೇಕೆರೂರು ಸಮೀಪದ ಬಸರೀಹಳ್ಳಿ ಹೆಲಿಪ್ಯಾಡ್‌ಗೆ ಸಿಎಂ ಬಂದಿಳಿಯಲಿದ್ದು, ಬಳಿಕ ಹಿರೇಕೆರೂರಿನಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ದೊರಕಲಿದೆ.
ಹಿರೇಕೆರೂರಿನ ದುರ್ಗಾದೇವಿ ಕೆರೆ ತುಂಬಿಸುವ ಏತ ನೀರಾವರಿ ಕಾಮಗಾರಿ, ಕೆರೆಗೆ ಬಾಗೀನ ಅರ್ಪಣೆ ಹಾಗೂ ಬಳಿಕ ಮಧ್ಯಾಹ್ನ ಎರಡು ಗಂಟೆಗೆ ರಾಣೆಬೆನ್ನೂರಿನ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಚಾಲನೆ ನೀಡುವರು. ಅಲ್ಲದೇ ರಾಣೆಬೆನ್ನೂರು ಎಪಿಎಂಸಿ ಸಮುದಾಯ ಭವನದಲ್ಲಿ ರಾಣೆಬೆನ್ನೂರು ನಗರಕ್ಕೆ ದಿನದ 24 ಗಂಟೆ ನೀರು ಪೂರೈಸುವ ಯೋಜನೆಗೆ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.
ಸಿಎಂ ಬೊಮ್ಮಾಯಿ ನಂತರ ಹಾವೇರಿ ನಗರಕ್ಕೆ ತೆರಳಲಿದ್ದು, ಹೊಸಮನಿ ಸಿದ್ದಪ್ಪ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಸುಮಾರು 8 ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ನಂತರ ಜಂಗಮನಕೊಪ್ಪ ಸಮೀಪ ಇರುವ ಒಂದು ಲಕ್ಷ ಲೀಟರ್ ಹಾಲು ಸಂಸ್ಕರಣಾ ಘಟಕಕ್ಕೆ ಶಂಕುಸ್ಠಾಪನೆ ನೆರವೇರಿಸಲಿದ್ದಾರೆ. ನಂತರ ರಸ್ತೆ ಮಾರ್ಗವಾದಿ ಹುಬ್ಬಳಿಗೆ ತೆರಳುವ ಸಿಎಂ ಬೊಮ್ಮಾಯಿ ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
ಮುಖ್ಯಮಂತ್ರಿ ಪ್ರವಾಸದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ್ ಅವರು ಹಾವೇರಿಯ ಹೊಸಮನಿ ಸಿದ್ದಪ್ಪ ಕ್ರೀಡಾಂಗಣದಲ್ಲಿ ನಾಳಿನ ಕಾರ್ಯಕ್ರಮಗಳ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ತಂದೆಯೇ ಮಗನನ್ನು ಕೊಂದ ಘಟನೆಗೆ ಸಾಕ್ಷಿಯಾದ 'ಮಣ್ಣಿಂದ ಎದ್ದು ಬಂದ ಕಾಲು'.. ರೋಚಕ ಘಟನೆ..!