ಹಾವೇರಿ: ಭಾನುವಾರ ಕೂಡಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸ್ವಕ್ಷೇತ್ರ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಮತ್ತು ಸವಣೂರು ತಾಲೂಕಿನಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಿಗ್ಗೆ 10:30ಕ್ಕೆ ಜಕ್ಕನಕಟ್ಟಿ ಗ್ರಾಮದ ಬಳಿ ನಿರ್ಮಾಣವಾಗುತ್ತಿರುವ ವಿಐಎನ್ಪಿ ಸಕ್ಕರೆ ಕಾರ್ಖಾನೆ ಸ್ಥಳಕ್ಕೆ ಸಿಎಂ ಭೇಟಿ ನೀಡುವರು. 11 ಗಂಟೆಗೆ ಗಂಜೀಗಟ್ಟಿ ಗ್ರಾಮದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಿಸಲಿರುವ ಮನೆಗಳ ಕಾಮಗಾರಿಗೆ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
220 ಕೆ.ವಿ ವಿದ್ಯುತ್ ಸ್ಟೇಷನ್ ನಿರ್ಮಾಣ ಕಾಮಗಾರಿ, ಕುರುಬರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ ಮಾಡುವ ಕಾರ್ಯಕ್ರಮವಿದೆ. ಅಲ್ಲದೇ, ಹನುಮರಹಳ್ಳಿ-ಶಿಗ್ಗಾಂವಿ-ಸವಣೂರು ರೈಲ್ವೆ ಸ್ಟೇಷನ್ ರಸ್ತೆ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯೂ ನೆರವೇರಲಿದೆ.
ಮಧ್ಯಾಹ್ನ 1 ಗಂಟೆಗೆ ಸವಣೂರು ಪಟ್ಟಣದಲ್ಲಿ ವಾಲ್ಮೀಕಿ ಭವನ ನಿರ್ಮಾಣ, ಪುರಸಭೆ ಕಾಮಗಾರಿಗಳು, ಸವಣೂರು ಏತ ನೀರಾವರಿ ಯೋಜನೆಯ ಜಾಕ್ವೆಲ್ ಹಾಗೂ ಪಂಪ್‌ಹೌಸ್ ಅನ್ನು ಬೊಮ್ಮಾಯಿ ಉದ್ಘಾಟಿಸುವರು. ಸಂಜೆ 4 ಗಂಟೆಗೆ ಸವಣೂರು ಪಟ್ಟಣದಿಂದ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಯತ್ತ ಪ್ರಯಾಣ ಬೆಳೆಸಲಿದ್ದಾರೆ.
ಸಿಎಂ ಜತೆಗೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಶನಿವಾರ ಸಿಎಂ ಹಾವೇರಿ ಜಿಲ್ಲೆಯ ಶಿಗ್ಗಾಂವ್ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ: ತವರು ಮನೆಯಲ್ಲಿ ಭಾವುಕರಾದ ಸಿಎಂ ಬಸವರಾಜ ಬೊಮ್ಮಾಯಿ