ಹಾವೇರಿ : 2018ರಲ್ಲಿ ವಿಧಾನಸಭೆ ಚುನಾವಣೆ ನಡೆದಾಗ ನಾನು ಶಿಗ್ಗಾಂವಿಗೆ ಬಂದಿದ್ದೆ. ಅಂದು ಶಾಸಕರಾಗಿದ್ದ ಬಸವರಾಜ್ ಬೊಮ್ಮಾಯಿ ಪರ ಪ್ರಚಾರ ವೇಳೆ ನಾನು ಬೊಮ್ಮಾಯಿಯವರು ಸಿಎಂ ಆಗುತ್ತಾರೆ ಎಂದಿದ್ದೆ. ಅದರಂತೆ ಬಸವರಾಜ್ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.
ಶಿಗ್ಗಾಂವಿಯಲ್ಲಿ ನಡೆದ ಕಿತ್ತೂರು ರಾಣೆ ಚೆನ್ಮಮ್ಮ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಲವರು ಕರಿ ಬಾಯಿಯವರು ಏನೇನೋ ಹೇಳುತ್ತಾರೆ. ಆದರೆ, ಬಸವರಾಜ ಬೊಮ್ಮಾಯಿ ಪೂರ್ಣ ಅವಧಿಯವರೆಗೆ ಸಿಎಂ ಆಗಿರುತ್ತಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ಪೂರ್ಣಗೊಳಿಸೋದು ಮಾತ್ರವಲ್ಲ ಅವರ ತಂದೆಯಂತೆಯೇ ಬೊಮ್ಮಾಯಿಯವರು ಮುಂಬರುವ ದಿನಗಳಲ್ಲಿ ಕೇಂದ್ರದಲ್ಲಿ ಕ್ಯಾಬಿನೆಟ್ ಮಂತ್ರಿ ಆಗ್ತಾರೆ ಎಂದು ಸಚಿವರು ಭವಿಷ್ಯ ನುಡಿದರು.
ಕಾಶಿಯಲ್ಲಿ ಗಂಗಾರತಿ ಮಾಡಿದಂತೆ ಹರಿಹರದಲ್ಲಿರುವ ಪಂಚಮಸಾಲಿ ಪೀಠದಿಂದ ತುಂಗಾರತಿ ಮಾಡಲಾಗುತ್ತದೆ ಎಂದು ಸಚಿವ ನಿರಾಣಿ ತಿಳಿಸಿದರು. ಕಿತ್ತೂರಿನಲ್ಲಿ ಮೊದಲಿನ ಅರಮನೆ ಮಾದರಿಯಲ್ಲಿ ಅರಮನೆ ನಿರ್ಮಾಣಕ್ಕೆ ಸಿಎಂ ಹಣ ನೀಡಿ ಈಗಾಗಲೇ ಐವತ್ತು ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದಾರೆ. ಅದರಂತೆ ಅರಮನೆ ನಿರ್ಮಾಣಕ್ಕೆ ಉಳಿದ ಹಣ ಸಹ ಬಿಡುಗಡೆ ಮಾಡಲಿದ್ದಾರೆ ಎಂದರು.
ಇದನ್ನೂ ಓದಿ: ರಾಜ್ಯದಲ್ಲಿಂದು 300 ಮಂದಿಗೆ ಕೋವಿಡ್ ಸೋಂಕು ದೃಢ, ಒಬ್ಬ ಮೃತ..