ETV Bharat / state

ನಾಳೆ ಹಾವೇರಿಗೆ ಸಿಎಂ ಬಿಎಸ್​ವೈ ಭೇಟಿ: ಏತ ನೀರಾವರಿ ಯೋಜನೆಗೆ ಚಾಲನೆ - CM BSY visit Haveri

ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ನಾಳೆ ಹಾವೇರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಹಾನಗಲ್ ತಾಲೂಕಿನ ಬಾಳಂಬೀಡ ಮತ್ತು ಹಿರೇಕಾಂಶಿ ಏತ ನೀರಾವರಿ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ.

CM BSY visit Haveri
ಸಿಎಂ.ಬಿ.ಎಸ್​ ಯಡಿಯೂರಪ್ಪ
author img

By

Published : Feb 23, 2020, 7:23 PM IST

ಹಾವೇರಿ: ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ನಾಳೆ ಹಾವೇರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದ ಪ್ರವಾಸಿ ಮಂದಿರದ ಆವರಣದಲ್ಲಿ ನಡೆಯುವ ತಾಲೂಕಿನ ಬಾಳಂಬೀಡ ಮತ್ತು ಹಿರೇಕಾಂಶಿ ಏತ ನೀರಾವರಿ ಯೋಜನೆಗೆ ಅವರು ಚಾಲನೆ ನೀಡಲಿದ್ದಾರೆ. ವರದಾ ನದಿಯಿಂದ ಸುಮಾರು 200 ಕೆರೆಗಳಿಗೆ ಈ ಯೋಜನೆ ನೀರು ತುಂಬಿಸಲಿದೆ.

ಸಿಎಂ ಭೇಟಿ ಹಿನ್ನೆಲೆ.. ಬಾಳಂಬೀಡ ಗ್ರಾಮದಲ್ಲಿ ಬೃಹತ್ ವೇದಿಕೆ
CM BSY visit Haveri
ಸಿಎಂ ಭೇಟಿ ಹಿನ್ನೆಲೆ.. ಬಾಳಂಬೀಡ ಗ್ರಾಮದಲ್ಲಿ ಬೃಹತ್ ವೇದಿಕೆ

ಮಧ್ಯಾಹ್ನ ಎರಡೂವರೆಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಹೆಲಿಕಾಪ್ಟರ್ ಮೂಲಕ ಅಕ್ಕಿಆಲೂರು ಹೆಲಿಪ್ಯಾಡ್​ಗೆ ಆಗಮಿಸಲಿದ್ದಾರೆ. ನಂತರ ಬಾಳಂಬೀಡ ಗ್ರಾಮದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಜೊತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ. ಪಾಟೀಲ್​ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

ಸಿಎಂ ಭೇಟಿ ಹಿನ್ನೆಲೆ ಬಾಳಂಬೀಡ ಗ್ರಾಮದಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದೆ. ಕಾರ್ಯಕ್ರಮದ ನಂತರ ಮಧ್ಯಾಹ್ನ ಮೂರುವರೆಗೆ ಸಿ.ಎಂ. ಯಡಿಯೂರಪ್ಪ ಹೆಲಿಕಾಪ್ಟರ್ ಮೂಲಕ ತಮ್ಮ ತವರು ಕ್ಷೇತ್ರ ಶಿಕಾರಿಪುರದತ್ತ ಪ್ರಯಾಣ ಬೆಳೆಸಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.