ಹಾವೇರಿ: ಸಿಎಂ ಬಿ.ಎಸ್.ಯಡಿಯೂರಪ್ಪ ಶನಿವಾರ ಹಾವೇರಿ ಜಿಲ್ಲೆಯ ಪ್ರವಾಸ ಕೈಗೊಂಡಿದ್ದರು. ಜಿಲ್ಲೆಯ ನೆರೆಪೀಡಿತ ಗ್ರಾಮಗಳಿಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿದರು.
ಜಿಲ್ಲಾ ಪ್ರವಾಸದ ಬಳಿಕ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳ ಜೊತೆ ಮಾತನಾಡಿದ ಸಿಎಂ, ಜಿಲ್ಲೆಯ ನೆರೆ ಪೀಡಿತ ಗ್ರಾಮಗಳ ಮತ್ತು ಸಂತ್ರಸ್ತರ ನೋವಿಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನೆರೆ ಪೀಡಿತ ಗ್ರಾಮಗಳ ಮತ್ತು ಸಂತ್ರಸ್ತರ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಿ ಎಂದರು.
ಸರ್ಕಾರ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡಲು ಮುಂದಾಗಿದೆ. ಅವುಗಳನ್ನು ಸಂತ್ರಸ್ತರಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳದ್ದು ಎಂದರು. ಈ ಸಂದರ್ಭದಲ್ಲಿ ಸಚಿವರಾದ ಆರ್.ಅಶೋಕ್, ಬಸವರಾಜ್ ಬೊಮ್ಮಾಯಿ ಸೇರಿದಂತೆ ಜಿಲ್ಲೆಯ ಅಧಿಕಾರಿಗಳು ಭಾಗವಹಿಸಿದ್ದರು.