ETV Bharat / state

ಬಿ.ಆರ್. ಪಾಟೀಲ್ ಬರೆದಿದ್ದಾರೆ ಎನ್ನಲಾದ ಪತ್ರ ಗಮನಿಸಿದ್ದೇನೆ: ಗುರುವಾರ ಶಾಸಕಾಂಗ ಸಭೆ ಕರೆದಿದ್ದೇನೆ: ಸಿದ್ದರಾಮಯ್ಯ

ಬಿ.ಆರ್. ಪಾಟೀಲ್ ಸಿಎಂಗೆ ಪತ್ರ ಬರೆದಿದ್ದಾರೆ ಎನ್ನಲಾದ ಪತ್ರಕ್ಕೆ ಸಂಬಂಧಿಸಿದಂತೆ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚರ್ಚಿಸಲು ಜುಲೈ 27ಕ್ಕೆ ಶಾಸಕಾಂಗ ಸಭೆ ಕರೆಯಲಾಗಿದೆ ಎಂದು ಸಿಎಂ ಹೇಳಿದ್ದಾರೆ.

CM Siddaramaiah
ಸಿಎಂ ಸಿದ್ದರಾಮಯ್ಯ
author img

By

Published : Jul 25, 2023, 4:10 PM IST

Updated : Jul 26, 2023, 8:18 AM IST

ಬಿ.ಆರ್. ಪಾಟೀಲ್ ಪತ್ರದ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

ಹಾವೇರಿ: ಆಳಂದ ಶಾಸಕ ಬಿ.ಆರ್. ಪಾಟೀಲ್ ಸಿಎಂಗೆ ಬರೆದಿದ್ದಾರೆ ಎನ್ನಲಾದ ಪತ್ರದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ''ನಾನು ಪತ್ರವನ್ನು ಗಮನಿಸಿದ್ದೇನೆ. ಗುರುವಾರ ಶಾಸಕಾಂಗ ಸಭೆ ಕರೆದಿದ್ದೇನೆ. ಅಂದೇ ಈ‌ ಕುರಿತು ಅವರೊಂದಿಗೆ ಚರ್ಚೆ ಮಾಡುತ್ತೇನೆ'' ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರು ಕೇಳಿದ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ನಕಲಿ ಪತ್ರ- ಬಿ.ಆರ್. ಪಾಟೀಲ್: ಇದಕ್ಕೂ ಮುನ್ನ, ಕಲಬುರಗಿ ಜಿಲ್ಲೆ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರು, ಸಿಎಂ ಸಿದ್ದರಾಮಯ್ಯಗೆ ಬರೆದಿದ್ದಾರೆ ಎನ್ನಲಾದ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಇದು ನಕಲಿ ಪತ್ರ ಎಂದು ಸ್ವತಃ ಶಾಸಕರೇ ಸ್ಪಷ್ಟನೆ ನೀಡಿದ್ದಾರೆ. ಜುಲೈ 24 ರಂದು ಬಿ.ಆರ್. ಪಾಟೀಲ್ ಹೆಸರಿನಲ್ಲಿ ಸಿಎಂಗೆ ಬರೆದಿದ್ದಾರೆ ಎನ್ನಲಾಗಿರುವ ಪತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಸಹಕಾರ ಹಾಗೂ ಇಲಾಖೆಗೆ ಸಂಬಂಧಿಸಿದ ಅನುದಾನದ ಬೇಡಿಕೆ ಬಗ್ಗೆ ಪ್ರಸ್ತಾಪವಾಗಿತ್ತು.

ವೈರಲ್​ ಆಗಿರುವ ಪತ್ರದಲ್ಲಿರುವ ಮಾಹಿತಿ ಈ ರೀತಿ ಇತ್ತು ''ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಜನರ ವಿಶ್ವಾಸ, ಭರವಸೆ ಮತ್ತು ಅವರ ಪ್ರೀತಿಯಿಂದ ನಾವು ಶಾಸಕರಾಗಿ ಆಯ್ಕೆಯಾಗಿದ್ದೇವೆ. ನಮ್ಮನ್ನು ಆರಿಸಿ ಕಳುಹಿಸಿದ ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಾಗುತ್ತಿಲ್ಲ. ವಿವಿಧ ಇಲಾಖೆಗೆ ಸಂಬಂಧಿಸಿದ 20ಕ್ಕೂ ಹೆಚ್ಚು ಸಚಿವರಿಗೆ ನಮ್ಮ ಕ್ಷೇತ್ರಕ್ಕೆ ಅನುದಾನ ನೀಡುವ ಕುರಿತು ಮನವಿ ಮಾಡಿದರೂ ಸ್ಪಂದನೆ ಲಭಿಸಿಲ್ಲ. ಪರಿಣಾಮ ಜನರ ಆಶೋತ್ತರ ಈಡೇರಿಸಲು ಆಗುತ್ತಿಲ್ಲ. ಜೊತೆಗೆ ಅನುದಾನ ಬಿಡುಗಡೆಗೊಳಿವುದಕ್ಕೂ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕಾಗಿ ಬೇಡಿಕೆಯನ್ನು ಇಡುತ್ತಿದ್ದಾರೆ. ಅನುದಾನಕ್ಕಾಗಿ ಮೂರನೇ ವ್ಯಕ್ತಿಯ ಮೊರೆ ಹೋಗಬೇಕಾಗಿದೆ. ಇದು ಅತ್ಯಂತ ಬೇಸರ ವಿಷಯ ಎಂದು ಆ ಪತ್ರದಲ್ಲಿ ತಿಳಿಸಲಾಗಿದೆ.

ಆರೋಗ್ಯ ಇಲಾಖೆಯ ಮುಖ್ಯ ಎಂಜಿನಿಯರ್​ ಅಮಾನತು ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಆರೋಗ್ಯ ಇಲಾಖೆ ಮುಖ್ಯ ಎಂಜಿನಿಯರ್​ ಅಮಾನತು ಮಾಡುವಂತೆ ಸಿಎಂ ಸೂಚನೆ: ಇನ್ನೊಂದಡೆ ಸಿಎಂ ಸಿದ್ದರಾಮಯ್ಯ ಇಂದು ಹಾವೇರಿಯಲ್ಲಿ ಬಿರುಸಿನ ಪ್ರವಾಸ ಕೈಗೊಂಡರು. ಈ ವೇಳೆ ಜಿಲ್ಲಾ ಆಸ್ಪತ್ರೆ ಸೋರುತ್ತಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು, ಮುಖ್ಯ ಎಂಜಿನಿಯರ್​ ಮಂಜುನಾಥ್​ನನ್ನು ಅಮಾನತು ಮಾಡಲು ಆರೋಗ್ಯ ಇಲಾಖೆಗೆ ಖಡಕ್​ ಸೂಚನೆ ನೀಡಿದರು.

ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಚಳಿ ಬಿಡಿಸಿದರು. ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡರು. ಸ್ಥಳದಲ್ಲೇ ಸಿಎಂ ಸಿದ್ದರಾಮಯ್ಯ, ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ಮಾತನಾಡಿ, ಈಗಲೇ ಮುಖ್ಯ ಎಂಜಿನಿಯರ್​​​ನ​ನ್ನು ಸಸ್ಪೆಂಡ್ ಮಾಡುವಂತೆ ಆದೇಶಿಸಿದರು.

ನಿರ್ಲಕ್ಷ್ಯ ವಹಿಸಿದ ಇನ್ನುಳಿದ ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗರಂ ಆದರು. ಜೊತೆಗೆ ಜಿಲ್ಲಾಸ್ಪತ್ರೆಯ ಸರ್ಜನ್, ವೈದ್ಯಾಧಿಕಾರಿಗಳಿಗೆ ಇಲ್ಲಿನ ಅವ್ಯವಸ್ಥೆ ಸರಿಪಡಿಸಲು ಖಡಕ್ ಎಚ್ಚರಿಕೆ ನೀಡಿದರು. ಆಸ್ಪತ್ರೆಯಲ್ಲಿ ಇಷ್ಟೆಲ್ಲ ಅವ್ಯವಸ್ಥೆಯಿದ್ದರೂ ನೀವು ಏನು ಮಾಡುತ್ತಿದ್ದೀರಿ ಎಂದು ಗದರಿಸಿದರು. ಏನಯ್ಯಾ ನಿನಗೆ ಮನುಷ್ಯತ್ವ ಇಲ್ವಾ. ಮಹಿಳೆಯರು, ಮಕ್ಕಳು ಹೇಗೆ ಇಲ್ಲಿ ಇರಬೇಕು ನೀನೇ ಹೇಳು ಎಂದು ಪ್ರಶ್ನಿಸಿದರು. ಸೋರುತ್ತಿರುವ ಜಿಲ್ಲಾಸ್ಪತ್ರೆ ವಿವಿಧ ಕೊಠಡಿಗಳನ್ನು ನಾಲ್ಕು ದಿನಗಳ ಒಳಗೆ ಸರಿಪಡಿಸಬೇಕು. ಇಲ್ಲವಾದಲ್ಲಿ ನಿಮ್ಮನ್ನೂ ಅಮಾನತು ಮಾಡುತ್ತೇನೆ ಎಂದು ಆರೋಗ್ಯ ಇಲಾಖೆಯ ಇನ್ನುಳಿದ ಎಂಜಿನಿಯರ್​ಗಳಿಗೂ ಎಚ್ಚರಿಕೆ ಕೊಟ್ಟರು.

ಇದಕ್ಕೂ ಮುನ್ನ ಹಾವೇರಿ ಪ್ರವಾಸಿ ಮಂದಿರದಲ್ಲಿ ಸಿಎಂ ಶಾಸಕರ ಜೊತೆಗೆ ಸಭೆ ನಡೆಸಿದರು. ನಂತರ ಜಿಲ್ಲಾಸ್ಪತ್ರೆಯ ರೋಗಿಗಳ ಜೊತೆಗೆ ಮಾತುಕತೆ ನಡೆಸಿ, ಸ್ವತಃ ತಾವೇ ಮಾಹಿತಿ ಪಡೆದುಕೊಂಡರು. ಈ ವೇಳೆ ಮದ್ಯ ನಿಷೇಧ ಮಾಡುವಂತೆ ಮಹಿಳೆಯರು ಒತ್ತಾಯ ಮಾಡಿದರು. ಮದ್ಯದಿಂದ ಸಂಸಾರಗಳು ಹಾಳಾಗುತ್ತಿವೆ. ಆದುಷ್ಟು ಬೇಗ ಮದ್ಯ ನಿಷೇಧ ಮಾಡಿ, ನಿಮಗೆ ಪುಣ್ಯ ಬರುತ್ತೆ ಎಂದು ಮಹಿಳೆಯರು ಮನವಿ ಮಾಡಿದರು.

ಸಿಎಂ ನೇತೃತ್ವದಲ್ಲಿ ಅಧಿಕಾರಿಗಳ ಪರಿಶೀಲನಾ ಸಭೆ: ''ಕರ್ನಾಟಕದ ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ'' ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹಾವೇರಿ ಜಿಲ್ಲೆಯಲ್ಲಿ ಹೆಚ್ಚು ರೈತ ಆತ್ಮಹತ್ಯೆಗಳು ವರದಿಯಾಗಿರುವ ಕಾರಣ ಅಧಿಕಾರಿಗಳ ಪರಿಶೀಲನಾ ಸಭೆ ನಡೆಸಿ ನಂತರ ಅವರು ಮಾತನಾಡಿದರು. ''ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಾವೇರಿ ಜಿಲ್ಲೆಯಲ್ಲಿ ಆರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ'' ಎಂದರು.

''ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ, ಈ ವರ್ಷ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗಿವೆ. ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ ಕೊಡುತ್ತೇವೆ. ಆದರೆ, ರೈತರ ಆತ್ಮಹತ್ಯೆ ಪ್ರಕರಣಗಳು ಆಗದಂತೆ ನೋಡಿಕೊಳ್ಳಬೇಕಿದೆ. ಅಧಿಕಾರಿಗಳಿಗೆ ಎಚ್ಚರವಹಿಸುವಂತೆ ಸೂಚಿಸಿದ್ದೇನೆ'' ಎಂದು ತಿಳಿಸಿದ ಅವರು, ''ರಾಜ್ಯದಲ್ಲಿ ಅನುಗ್ರಹ ಕಾರ್ಯಕ್ರಮ ಮತ್ತೆ ಜಾರಿ ಮಾಡುತ್ತೇವೆ. ಇಂದಿರಾ ಕ್ಯಾಂಟೀನ್ ವ್ಯವಸ್ಥಿತವಾಗಿ ಜಾರಿ ಮಾಡುತ್ತೇವೆ. ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನಲ್ಲಿ ಹೊಸ ಇಂದಿರಾ ಕ್ಯಾಂಟೀನ್ ಮಾಡೋಕೆ ಡಿಸಿಗೆ ತಿಳಿಸಿದ್ದೇನೆ'' ಎಂದರು.

ಇದನ್ನೂ ಓದಿ: ಶಾಸಕರು ದೂರು ನೀಡಿದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

Last Updated : Jul 26, 2023, 8:18 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.