ಹಾವೇರಿ: ಬೆಳಗಾವಿ ಗಡಿವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಇಬ್ಬರು ಸಚಿವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸವಾಲು ಹಾಕಿರುವುದನ್ನು ಖಂಡಿಸುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು. ಹಾವೇರಿಯಲ್ಲಿ ಮಾತನಾಡುತ್ತಾ, ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಮಹಾರಾಷ್ಟ್ರದಲ್ಲೂ ಅವರದ್ದೇ ಸರ್ಕಾರವಿದೆ. ಕೇಂದ್ರದಲ್ಲೂ ಬಿಜೆಪಿ ಸರ್ಕಾರವೇ ಇದ್ದರೂ ಸಹ ರಾಜಕೀಯಕ್ಕಾಗಿ ಇದನ್ನು ಬಳಸಿಕೊಳ್ಳುತ್ತಿದ್ದಾರೆ ಎಂದರು.
ಈ ಕುರಿತಂತೆ ಸಿಎಂ ಬೊಮ್ಮಾಯಿ ಯಾವುದೇ ಹೇಳಿಕೆಗಳಿಗೆ ಬಗ್ಗಬಾರದು. ಗಟ್ಟಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ಉತ್ತರಿಸಬೇಕು. ಅವರ ಜೊತೆ ನಾವಿದ್ದೇವೆ ಎಂದು ಹೇಳಿದರು.
ರಾಜ್ಯ ಸರ್ಕಾರ ಕೇಸರಿ ಶಾಲೆ ತೆರೆಯಲು ಹೊರಟಿರುವ ಕುರಿತಂತೆ ಮಾತನಾಡಿದ ಸಲೀಂ ಅಹ್ಮದ್, ಸರ್ಕಾರ ಮೊದಲು ನಲವತ್ತು ಪರ್ಸೆಂಟೇಜ್ ಕಮಿಷನ್ ತಡೆಯಲಿ ಎಂದು ಟೀಕಿಸಿದರು. ಆಮೇಲೆ ಕೇಸರಿ ಶಾಲೆ ಮದರಸಾ ನಿಷೇಧ ವಿಷಯದ ಬಗ್ಗೆ ತಲೆಕೆಡಿಸಿಕೊಳ್ಳಲಿ ಎಂದು ಪ್ರತಿಕ್ರಿಯಿಸಿದರು.
ಇದನ್ನೂ ಓದಿ:ರಾಹುಲ್ ಗಾಂಧಿಗೆ ಆರ್ಎಸ್ಎಸ್ ಕುರಿತು ಸಂಪೂರ್ಣ ಮಾಹಿತಿ ಇಲ್ಲ: ಸಿಎಂ ಬೊಮ್ಮಾಯಿ