ETV Bharat / state

ರಾಣೆಬೆನ್ನೂರಿನಲ್ಲಿ ಅನರ್ಹ ಶಾಸಕ ಆರ್.ಶಂಕರ್​ಗೆ ಸಿಎಂ ಧನ್ಯವಾದ ಅರ್ಪಣೆ

author img

By

Published : Nov 7, 2019, 8:23 PM IST

ರಾಣೆಬೆನ್ನೂರು ತಾಲೂಕಿನ ಹೂಲಿಹಳ್ಳಿ ಬಳಿ ಇರುವ ಮೆಗಾ ಮಾರುಕಟ್ಟೆಯಲ್ಲಿ ವಿವಿಧ ಮೂಲಭೂತ ಸೌಕರ್ಯ ಕಾಮಗಾರಿಗಳಿಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿ, ಅನರ್ಹ ಶಾಸಕ ಆರ್. ಶಂಕರ್​ ಅವರಿಗೆ ಧನ್ಯವಾದ ಹೇಳಿ ನೆರೆದಿದ್ದ ಜನರಲ್ಲಿ ಅಚ್ಚರಿ ಮೂಡಿಸಿದರು.

ಮೆಗಾ ಮಾರುಕಟ್ಟೆಯಲ್ಲಿ ವಿವಿಧ ಮೂಲಭೂತ ಕಾಮಗಾರಿಗಳಿಗೆ ಚಾಲನೆ

ರಾಣೆಬೆನ್ನೂರು: ಅನರ್ಹ ಶಾಸಕ ಆರ್.ಶಂಕರ್​ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಧನ್ಯವಾದ ಹೇಳುವ ಮೂಲಕ ಜನರಲ್ಲಿ ಅಚ್ಚರಿ ಮೂಡಿಸಿದರು.

ಮೆಗಾ ಮಾರುಕಟ್ಟೆಯಲ್ಲಿ ವಿವಿಧ ಮೂಲಭೂತ ಕಾಮಗಾರಿಗಳಿಗೆ ಚಾಲನೆ

ತಾಲೂಕಿನ ಹೂಲಿಹಳ್ಳಿ ಬಳಿ ಇರುವ ಮೆಗಾ ಮಾರುಕಟ್ಟೆಯಲ್ಲಿ ವಿವಿಧ ಮೂಲಭೂತ ಸೌಕರ್ಯ ಕಾಮಗಾರಿಗಳಿಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದರು.

ಸುಮಾರು 220 ಎಕರೆ ವಿಸ್ತೀರ್ಣ ಹೊಂದಿರುವ ಈ ಮೆಗಾ ಮಾರುಕಟ್ಟೆಯಲ್ಲಿ ಈಗಾಗಲೇ ಹಲವು ಕಾಮಗಾರಿಗಳು ನಡೆದಿವೆ. ಒಟ್ಟು 105 ರೂ. ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಿಎಂ ಇಂದು ಶಂಕುಸ್ಥಾಪನೆ ನೆರವೇರಿಸಿದ್ರು.

ನಂತರ ಮಾತನಾಡಿದ ಸಿಎಂ, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಶಾಶ್ವತ ನೀರಾವರಿಗೆ 22 ಸಾವಿರ ಕೋಟಿ ಅನುದಾನ ನೀಡಿದೆ. ರಾಜ್ಯದಲ್ಲಿ ಅತಿವೃಷ್ಠಿಯಿಂದ ಸುಮಾರು 7 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು, ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಪರಿಹಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

ಆರ್.ಶಂಕರ್​ಗೆ ಅಭಿನಂದನೆ ತಿಳಿಸಿದ ಸಿಎಂ:

ರಾಣೆಬೆನ್ನೂರು ಕ್ಷೇತ್ರದ ಅನರ್ಹ ಶಾಸಕ ಆರ್.ಶಂಕರ್​ ಈ ಕಾರ್ಯಕ್ರಮದಲ್ಲಿ ಹಾಜರಿರಲಿಲ್ಲ. ಈ ವೇಳೆ ಸಿಎಂ ಯಡಿಯೂರಪ್ಪ ಭಾಷಣ ಮಾಡುವ ಸಮಯದಲ್ಲಿ ಅನರ್ಹ ಶಾಸಕರಾದ ಆರ್.ಶಂಕರ್​ ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಈ ಸಂದರ್ಭ ನೆರೆದಿದ್ದ ಜನರು ಸಿಎಂ ಮಾತಿಗೆ ಪ್ರತಿಕ್ರಿಯೆ ನೀಡದೆ ಸುಮ್ಮನಿದ್ದರು.

ಕಾರ್ಯಕ್ರಮದಲ್ಲಿ ಶಾಸಕರಾದ ನೆಹರು ಓಲೇಕಾರ, ವಿರೂಪಾಕ್ಷಪ್ಪ ಬಳ್ಳಾರಿ, ಎಪಿಎಂಸಿ ಸದಸ್ಯರಾದ ಬಸವರಾಜ ಹುಲ್ಲತ್ತಿ, ಸಿದ್ದಲಿಂಗಪ್ಪ ಕುಡಗೊಲ, ರಾಜೇಂದ್ರ ‌ಬಸ್ಸೇನಾಯಕರ, ಸುರೇಶ ಬಿಲ್ಲಾಳ ಸೇರಿದಂತೆ ಇತರರು ಹಾಜರಿದ್ದರು.

Intro:KN_RNR_05 CM YEDIYURAPPA_SPEAK TO PUBLIC_VIS-KAC10001

ಅನರ್ಹ ಶಾಸಕ ಆರ್.ಶಂಕರಗೆ ಧನ್ಯವಾದಗಳು ಹೇಳಿದ ಸಿಎಂ ಯಡಿಯೂರಪ್ಪ.

ರಾಣೆಬೆನ್ನೂರ: ರಾಣೆಬೆನ್ನೂರ ಅನರ್ಹ ಶಾಸಕರಾದ ಆರ್.ಶಂಕರ ಅವರಿಗೆ ಧನ್ಯವಾದಗಳು ಹೇಳುವ ಮೂಲಕ ಜನರಲ್ಲಿ ಅಚ್ಚರಿ ಮೂಡಿಸಿದರು.

ರಾಣೆಬೆನ್ನೂರ ತಾಲೂಕಿನ ‌ಹೂಲಿಹಳ್ಳಿ ಬಳಿ ಇರುವ ಮೆಗಾ ಮಾರುಕಟ್ಟೆಯಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರವು
ರಾಜ್ಯದಲ್ಲಿ ಶಾಸ್ವತ ನೀರಾವರಿಗೆ 22 ಸಾವಿರ ಕೋಟಿ ಅನುದಾನ ನೀಡಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಕಡೆ ನೀರಾವರಿ ಕ್ಷೇತ್ರವಾಗಿ ಮಾರ್ಪಡಲಿದೆ.
Body:ರಾಜ್ಯದಲ್ಲಿ ಅತಿವೃಷ್ಠಿಯಿಂದ ಸುಮಾರ 7 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಈ ಹಾನಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡುತ್ತದೆ ಎಂದು ಜನರಿಗೆ ಆಶ್ವಾಸನೆ ನೀಡಿದರು. ಮಳೆಯಿಂದ ಮನೆ ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರ್ಕಾರ ಈಗಾಗಲೇ ತಕ್ಷಣ ಹತ್ತು ಸಾವಿರ ಪರಿಹಾರ ನೀಡಿದ್ದು, ಮುಂದಿನ ದಿನಗಳಲ್ಲಿ ಹಂತಹಂತವಾಗಿ ಪರಿಹಾರ ನೀಡಲಾಗುತ್ತದೆ ಎಂದರು.

ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಇನ್ನು ಮಾರುಕಟ್ಟೆಯಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಂದ್ ಮಾಡಲಾಗುವುದು ಎಂದರು.

Conclusion:ಆರ್.ಶಂಕರಗೆ ಅಭಿನಂದನೆಗಳು ತಿಳಿಸಿದ ಸಿಎಂ....
ರಾಣೆಬೆನ್ನೂರ ಕ್ಷೇತ್ರದ ಅನರ್ಹ ಶಾಸಕ ಆರ್.ಶಂಕರ ಈ ಉದ್ಘಾಟನೆ ಕಾರ್ಯಕ್ರಮದಲ್ಲಿ ಗೈರಾಗಿದ್ದರು. ಈ ವೇಳೆ ಸಿಎಂ ಯಡಿಯೂರಪ್ಪ ಭಾಷಣ ಮಾಡುವ ಸಮಯದಲ್ಲಿ ಅನರ್ಹ ಶಾಸಕರಾದ ಆರ್.ಶಂಕರ ಅವರಿಗೆ ನಾ ಅಭಿನಂದನೆ ಸಲ್ಲಿಸುತ್ತೆನೆ ಎಂದರು. ಆಗ ನೆರೆದಿದ್ದ ಜನರು ಯಡಿಯೂರಪ್ಪ ಅವರ ಮಾತಿಗೆ ಪ್ರತಿಕ್ರಿಯೆ ನೀಡದೆ ಸುಮ್ಮನಿದ್ದರು.

ಕಾರ್ಯಕ್ರಮದಲ್ಲಿ ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅಧ್ಯಕ್ಷತೆ ವಹಿಸಿದ್ದರು, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ನೆಹರು ಓಲೇಕಾರ, ಎಪಿಎಂಸಿ ಅಧ್ಯಕ್ಷ ಕಮಲವ್ವ ಪಾರ್ವತೇರ ಸದಸ್ಯರಾದ ಬಸವರಾಜ ಹುಲ್ಲತ್ತಿ, ಸಿದ್ದಲಿಂಗಪ್ಪ ಕುಡಗೊಲ, ಸುರೇಶ ಬಿಲ್ಲಾಳ, ರಾಜೇಂದ್ರ ಬಸೇನಾಯ್ಕರ, ದೇವೆಂದ್ರಪ್ಪ ನಾಯಕ, ಬಿಜೆಪಿ ಮುಖಂಡರಾದ ಅರುಣಕುಮಾರ ಪೂಜಾರ, ಡಾ.ಬಸವರಾಜ ಕೇಲಗಾರ, ಮಲ್ಲಿಕಾರ್ಜುನ ಅಂಗಡಿ, ಭಾರತಿ ಅಳವಂಡಿ ಸೇರಿದಂತೆ ಜಿಲ್ಲಾ ಅಧಿಕಾರಿಗಳ ಪಾಲ್ಗೊಂಡಿದ್ದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.