ಹಾವೇರಿ: ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ. ಮಹೇಶ ಜೋಷಿ ಪಾಲ್ಗೊಂಡಿದ್ದ ಕಸಾಪ ಸರ್ವಸದಸ್ಯರ ಸಭೆಯಲ್ಲಿ ಸದಸ್ಯರ ನಡುವೆ ಪರಸ್ಪರ ಮಾತಿನ ಚಕಮಕಿ ಉಂಟಾದ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೆಲೆಯಲ್ಲಿ ನಡೆದಿದೆ. ಕಾಗಿನೆಲೆಯ ಕನಕ ಕಲಾಭವನದಲ್ಲಿ ನಡೆದ ಸಭೆಯಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು.
ಕಸಾಪ ನಿಬಂಧನೆಗಳ ತಿದ್ದುಪಡಿ ವಿಚಾರವಾಗಿ ಸಭೆಯಲ್ಲಿ ಗದ್ದಲ ನಡೆದಿದೆ. ನಿಬಂಧನೆಗಳ ತಿದ್ದುಪಡಿ ವಿಚಾರದಲ್ಲಿ ಅಧ್ಯಕ್ಷ ಡಾ. ಮಹೇಶ ಜೋಷಿ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅಧ್ಯಕ್ಷರ ವಿರುದ್ಧ ಕೆಲವು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ನಿಬಂಧನೆಗಳ ತಿದ್ದುಪಡಿಯ ಮೂಲಕ ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ತಿನ ಆಶಯಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ಇದೆ ವೇಳೆ ಅಧ್ಯಕ್ಷರ ಮಾತಿಗೆ ವಿರೋಧ ಮಾಡಿದ ಸದಸ್ಯರನ್ನ ಸಭೆಯಿಂದ ಹೊರಹಾಕಲು ಯತ್ನಿಸಲಾಯಿತು. ಆಗ ಪರಿಸ್ಥಿತಿ ಬಿಗಡಾಯಿಸಿತು. ಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿ, ಪರಸ್ಪರ ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಬಳಿಕ ಪೊಲೀಸರ ಮಧ್ಯಸ್ಥಿಕೆಯಿಂದಾಗಿ ವಾತಾವರಣ ನಿಯಂತ್ರಣಕ್ಕೆ ಬಂತು.
ಇದನ್ನೂ ಓದಿ: ಆ್ಯಸಿಡ್ ದಾಳಿಗೆ ತುತ್ತಾದ ಯುವತಿಯ ಚಿಕಿತ್ಸೆಗೆ 1 ಲಕ್ಷ ರೂ. ಘೋಷಿಸಿದ ಸಚಿವ ಮುರುಗೇಶ್ ನಿರಾಣಿ