ಹಾವೇರಿ: ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಗೆಲುವಿಗಾಗಿ ಪ್ರಾರ್ಥಿಸಿ ಪೂಜೆ ಮಾಡಿಸಲಾಯಿತು.
ಇಂದು ಉಪ ಚುನಾವಣೆಯ ಫಲಿತಾಂಶ ಹೊರ ಬೀಳುವ ಹಿನ್ನೆಲೆ ಅನೇಕರು ದೇವರ ಮೊರೆ ಹೋಗಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಗಣೇಶ ದೇವಸ್ಥಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ಕೋಳಿವಾಡ ಹೆಸರಿನಲ್ಲಿಯೇ ರಸೀದಿ ಪಡೆದು, ಅವರ ಗೆಲುವಿಗಾಗಿ ಪೂಜೆ ಸಲ್ಲಿಸಿದರು.