ETV Bharat / state

ಹಾವೇರಿ: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಪ್ರತಿಭಟನೆ - Congress activists protest in Haveri

ಹಾವೇರಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಕಾಂಗ್ರೆಸ್​ ಕಾರ್ಯಕರ್ತರು ಸರ್ಕಾರದ ವಿರುದ್ಧ, ಬಿಜೆಪಿ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿದರು.

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಪ್ರತಿಭಟನೆ

author img

By

Published : Aug 22, 2022, 8:00 PM IST

ಹಾವೇರಿ: ಪ್ರತಿಪಕ್ಷನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಸೋಮವಾರ ಹಾವೇರಿ ಜಿಲ್ಲೆ ರಾಣೆಬೆನ್ನೂರು ಬಂದ್ ಆಚರಿಸಲಾಯಿತು. ಸಿದ್ದರಾಮಯ್ಯ ಅಭಿಮಾನಿಗಳ ಸಂಘ, ಸರ್ವಜನಾಂಗ ಅಭಿಮಾನಿಗಳ ಸಂಘ ಬಂದ್​ಗೆ ಕರೆ ನೀಡಿದ್ದವು. ಬಂದ್ ಅಂಗವಾಗಿ ರಾಣೆಬೆನ್ನೂರು ಪಟ್ಟಣದ ಕೆಇಬಿ ಗಣೇಶ ದೇವಸ್ಥಾನದಿಂದ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ, ಬಿಜೆಪಿ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿದರು. ಆರ್​ಎಸ್​ಎಸ್​ ಮತ್ತು ಸಂಘ ಪರಿವಾರದ ವಿರುದ್ಧ ಘೋಷಣೆ ಕೂಗಿದರು. ಸಿದ್ದರಾಮಯ್ಯರನ್ನ ಸೈದ್ಧಾಂತಿಕವಾಗಿ ಎದುರಿಸಲು ಆಗದವರು ಈ ರೀತಿ ಕೃತ್ಯ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸಿದ್ದರಾಮಯ್ಯ ಅಭಿಮಾನಿ ಜಟ್ಟೆಪ್ಪ ಕರೇಗೌಡರ ಅವರು ಮಾತನಾಡಿದರು

ಪೊಲೀಸರಿಂದ ತಡೆ: ಸಿದ್ದರಾಮಯ್ಯ ಭಾವಚಿತ್ರ ಹಿಡಿದ ಅಭಿಮಾನಿಗಳು ಸಿದ್ದರಾಮಯ್ಯ ಸರ್ವಜನಾಂಗದ ನಾಯಕ ಎಂದು ಜಯಘೋಷ ಹಾಕಿದರು. ನಗರದ ಪ್ರಮುಖ ವೃತ್ತಗಳಲ್ಲಿ ಕೆಲ ಕಾಲ ನಿಂತು ಪ್ರತಿಭಟನೆ ನಡೆಸಿದರು. ನಂತರ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಸಕ ಅಪ್ಪಜ್ಜು ರಂಜನ್ ಪ್ರತಿಕೃತಿ ದಹನ ಮಾಡಲು ಮುಂದಾದಾಗ ಪ್ರತಿಭಟನಾಕಾರರನ್ನ ಪೊಲೀಸರು ತಡೆದರು.

ಕಾರ್ಯಕರ್ತರಿಂದ ಎಚ್ಚರಿಕೆ: ಬಂದ್ ಹಿನ್ನೆಲೆಯಲ್ಲಿ ನಗರದ ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಲಾಗಿತ್ತು. ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದ್ದರಿಂದ ಕೆಲ ಸಮಯ ರಸ್ತೆ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಇದೇ 26 ರಂದು ಮಡಿಕೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ತಾವು ಪಾಲ್ಗೊಂಡು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಕಾರ್ಯಕರ್ತರು ಎಚ್ಚರಿಕೆ ನೀಡಿದರು.

ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಹಾವೇರಿ ಎಸ್​ಪಿ ವಿಜಯಕುಮಾರ್​ ಪ್ರತಿಭಟನೆ ವೇಳೆ ಹಾಜರಿದ್ದು, ಬಂದ್ ಶಾಂತಿಯುತವಾಗಿ ಮುಕ್ತಾಯವಾಗುವವರೆಗೆ ಪಟ್ಟಣದಲ್ಲಿದ್ದರು.

ಓದಿ: ಶಿವಮೊಗ್ಗ: ಗಣೇಶೋತ್ಸವ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಡಿಸಿ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.