ಹಾವೇರಿ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು. ನಗರದ ಕಾಂಗ್ರೆಸ್ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ನಂತರ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಉಭಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಗಳು ರೈತ, ಕಾರ್ಮಿಕ, ಜನವಿರೋಧಿ ಮಸೂದೆಗಳನ್ನು ಜಾರಿಗೆ ತರಲು ಹೊರಟಿವೆ.
ಕೂಡಲೇ ಮಸೂದೆಗಳನ್ನು ವಾಪಸ್ ಪಡೆಯಬೇಕು. ಇಲ್ಲದಿದ್ರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಉಗ್ರ ಪ್ರತಿಭಟನೆಗೆ ಮುಂದಾಗಲಿದೆ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ ಎಂ ಹಿರೇಮಠ, ಮಾಜಿ ಸಚಿವ ರುದ್ರಪ್ಪ ಲಮಾಣಿ ಸೇರಿ ವಿವಿಧ ಮುಖಂಡರು ಉಪಸ್ಥಿತರಿದ್ದರು.