ಹಾವೇರಿ: ಚಳ್ಳಕೆರೆಯಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆಯ ಪಾದಯಾತ್ರೆಗೆ ಹೊರಟಿದ್ದ ಕಾಂಗ್ರೆಸ್ ಕಾರ್ಯಕರ್ತರ ಬಸ್ವೊಂದು ಪಲ್ಟಿಯಾದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹುಲುಬಿಕೊಂಡ ಗ್ರಾಮದಲ್ಲಿ ನಡೆದಿದೆ. ಸೊರಬ ತಾಲೂಕಿನ ಇಂಡುವಳ್ಳಿ ಗ್ರಾಮ ಪಂಚಾಯಿತಿಯಿಂದ ಭಾರತ ಐಕ್ಯತಾ ಯಾತ್ರೆಗೆ ಹೊರಟ ಕಾಂಗ್ರೆಸ್ ಕಾರ್ಯಕರ್ತರ ಬಸ್, ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ.
ಬಸ್ನಲ್ಲಿದ್ದ ಕಾರ್ಯಕರ್ತರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮತ್ತು ಸ್ಥಳೀಯರು ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಬಳಿಕ ಕಾರ್ಯಕರ್ತರಿಗೆ ಬೇರೇ ವಾಹನದ ವ್ಯವಸ್ಥೆ ಮಾಡಿಕೊಡಲಾಗಿದೆ.
ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ: ಜನ ಸೇರಿಸದವರಿಗೆ ಟಿಕೆಟ್ ಕೈ ತಪ್ಪುವ ಆತಂಕ