ETV Bharat / state

ಪರಿಷತ್ ಅಭ್ಯರ್ಥಿಗಳ ಆಯ್ಕೆ ಸಂಬಂಧ ಇಂದು ಸಂಜೆ ಕೋರ್​ ಕಮಿಟಿ ಸಭೆ: ಬಸವರಾಜ ಬೊಮ್ಮಾಯಿ

ಜಿಲ್ಲಾಸ್ಪತ್ರೆಯಲ್ಲಿ ಇಂದು ವೈರಾಣು ಸಂಶೋಧನೆ ಮತ್ತು ಪತ್ತೆ ಲ್ಯಾಬ್ ಉದ್ಘಾಟಿಸಿ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲೆಯಲ್ಲಿ ಕೊರೊನಾ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದಿದ್ದಾರೆ.

ಗೃಹ ಸಚಿವ ಬಸವರಾಜ್ ಬೊಮ್ಮಾಯಿ
ಗೃಹ ಸಚಿವ ಬಸವರಾಜ್ ಬೊಮ್ಮಾಯಿ
author img

By

Published : Jun 15, 2020, 3:30 PM IST

ಹಾವೇರಿ: ವಿಧಾನ ಪರಿಷತ್ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಇಂದು ಸಂಜೆ ಬೆಂಗಳೂರಿನಲ್ಲಿ ಕೋರ್​ ಕಮಿಟಿ ಸಭೆಯಿದೆ. ಸಭೆಯಲ್ಲಿ ಅಭ್ಯರ್ಥಿಗಳ ಅಯ್ಕೆ ಕುರಿತಂತೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಇಂದು ವೈರಾಣು ಸಂಶೋಧನೆ ಮತ್ತು ಪತ್ತೆ ಲ್ಯಾಬ್ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೊನಾ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹಾವೇರಿಯಲ್ಲಿರುವ ಲ್ಯಾಬ್​ ದಿನಕ್ಕೆ 300 ಪ್ರಕರಣಗಳ ಪರೀಕ್ಷೆ ನಡೆಸಲಿದೆ. ಆರಂಭದಲ್ಲಿ ಕೇವಲ 60 ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಬೊಮ್ಮಾಯಿ ತಿಳಿಸಿದರು. ರಾಜ್ಯದಲ್ಲಿ ಸುಮಾರು 65 ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಸೋಂಕು ದೃಢಪಟ್ಟಿದೆ. ಅದರಲ್ಲಿ 31 ಪ್ರಕರಣಗಳಲ್ಲಿ ಕೊರೊನಾ ಸಕ್ರಿಯವಾಗಿದ್ದು, ಉಳಿದವರು ಗುಣಮುಖರಾಗಿದ್ದಾರೆ ಎಂದು ತಿಳಿಸಿದರು.

ಓದಿ: ಇನ್ನೂ 3 ವರ್ಷ ಯಡಿಯೂರಪ್ಪನವರೇ ಸಿಎಂ, ಬದಲಾವಣೆ ಇಲ್ಲ.. ಸಂಸದ ವಿ ಶ್ರೀನಿವಾಸ್‌ ಪ್ರಸಾದ್

ಅಲ್ಲದೆ ಕೊರೊನಾ ಸೋಂಕು ದೃಢಪಟ್ಟ ಪೊಲೀಸ್ ಸಿಬ್ಬಂದಿ ಕಚೇರಿಗಳನ್ನ ಸ್ಯಾನಿಟೈಸ್​​ ಮಾಡಿ ಅದನ್ನ ಸೀಲ್​​ ಡೌನ್ ಮಾಡಲಾಗುವುದು. ಬೇರೆ ಸ್ಟೇಷನ್​​​ನಿಂದ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಗೆ ಮುಂದಾದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.