ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಆರ್ಭಟ ಮುಂದುವರೆದಿದ್ದು, ಸೋಂಕಿಗೆ ಇಬ್ಬರು ವೃದ್ಧೆಯರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.
ಪಿ. 6832ರ ಪ್ರಾಥಮಿಕ ಸಂಪರ್ಕದಿಂದ ಪಿ.8295 ವೃದ್ಧೆಗೆ ಸೋಂಕು ತಗುಲಿದ್ದು, ಜೂನ್ 20ರಂದು ಕೋವಿಡ್-19 ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಐಸಿಯುನಲ್ಲಿಡಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಹಾಗೆಯೇ ಆಲದಕಟ್ಟಿ ಗ್ರಾಮದ 60 ವರ್ಷದ ವೃದ್ಧೆಗೆ ಸೋಂಕು ದೃಢಪಟ್ಟಿದ್ದು, ಜೂನ್ 24ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ಜೂನ್ 28ರಂದು ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ಫಲಿಸದೆ ಇವರೂ ಕೂಡಾ ಕೊನೆಯುಸಿರೆಳೆದಿದ್ದಾರೆ.