ಹಾವೇರಿ: ಶಿಗ್ಗಾಂವಿ ತಾಲೂಕಿನ ತಹಶೀಲ್ದಾರ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ತಹಶೀಲ್ದಾರ್ ಕಚೇರಿ ಸೀಲ್ಡೌನ್ ಮಾಡುವಂತೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಆದೇಶ ಮಾಡಿದ್ದಾರೆ.

ತಹಶೀಲ್ದಾರ್ಗೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರು ತಾಲೂಕಿನಲ್ಲಿ ಕೊರೊನಾ ವಾರಿಯರ್ಸ್ ಆಗಿ ಕರ್ತವ್ಯ ಮಾಡಿದ್ದರು.