ಹಾವೇರಿ: ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದ ತರಕಾರಿ ಮಾರುಕಟ್ಟೆಯಲ್ಲಿ ಮಾಸ್ಕ್ ಹಾಕದವರ ಸ್ವ್ಯಾಬ್ ಪರೀಕ್ಷೆ ಮಾಡಲಾಗುತ್ತಿದೆ.
ನಗರಸಭೆ ಸಿಬ್ಬಂದಿ ಮಾಸ್ಕ್ ಹಾಕದವರನ್ನು ಕರೆದು ಆರ್ಟಿಪಿಸಿಆರ್ ಪರೀಕ್ಷೆಗಾಗಿ ಸ್ವ್ಯಾಬ್ ಪಡೆದು, ನಂತರ ಮಾಸ್ಕ್ ಹಾಕಿಸಿ ಕಳುಹಿಸುತ್ತಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರು ಹೆಚ್ಚಾಗುತ್ತಿದ್ದರೂ ಜನರು ಮಾತ್ರ ಮಾಸ್ಕ್ ಹಾಕದೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ.
ಇದನ್ನೂ ಓದಿ: ಮೈಸೂರಿನಲ್ಲಿ ತಾಯಿ, ಗರ್ಭಿಣಿ ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆಗೈದ ಕಿರಾತಕ