ಹಾವೇರಿ: ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ನಗರಸಭೆಯ ಅರು ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಗುರುವಾರದಿಂದ ಆರೋಗ್ಯ ಇಲಾಖೆ ರ‍್ಯಾಂಡಮ್ ಆ್ಯಂಟಿಜೆನ್ ಕಿಟ್ ಮೂಲಕ ನಗರಸಭೆಯ ಎಲ್ಲಾ ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸುತ್ತಿದ್ದು, ಗುರುವಾರ ಮೂವರಿಗೆ ಮತ್ತು ಶುಕ್ರವಾರ ಮೂವರಿಗೆ ಕೊರೊನಾ ಇರುವುದು ಪತ್ತೆಯಾಗಿದೆ ಎಂದು ನಗರಸಭೆ ಪೌರಾಯುಕ್ತ ಬಸವರಾಜ್ ತಿಳಿಸಿದ್ದಾರೆ.
ನಗರಸಭೆ ಕಚೇರಿಗೆ ಸ್ಯಾನಿಟೈಸರ್ ಸಿಂಪಡಿಸಲಾಗಿದ್ದು, ಎಂದಿನಂತೆ ಕಾರ್ಯ ನಿರ್ವಹಿಸುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.