ಹಾವೇರಿ: ಸ್ಲೀಪರ್ ಕೋಚ್ ಬಸ್ನಲ್ಲಿ ವಿಷ ಸೇವಿಸಿ ಪ್ರೇಮಿಗಳು ಮಲಗಿದ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕು ಚಳಗೇರಿ ಟೋಲನಾಕಾ ಬಳಿಯ ನಡೆದಿದೆ. ಮನೆಯಲ್ಲಿ ಮದುವೆಗೆ ಒಪ್ಪದ ಕಾರಣ ಇಬ್ಬರು ಪ್ರೇಮಿಗಳು ವಿಷ ಸೇವಿಸಿ ಬಸ್ನಲ್ಲಿ ಮಲಗಿದ್ದಾರೆ. ಘಟನೆ ಐದು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಯುವಕ ಬದುಕಿದ್ದು, ಯುವತಿ ಕೊನೆಯುಸಿರೆಳೆದಿದ್ದಾಳೆ.
ಮದುವೆ ಆಗೋಕೆ ಮನೆಯಲ್ಲಿ ನಿರಾಕರಣೆ ಹಿನ್ನೆಲೆ ಇಬ್ಬರು ಪ್ರೇಮಿಗಳು ವಿಷ ಸೇವಿಸಿದ್ದಾರೆ. ಮೃತಪಟ್ಟ ಯುವತಿಯನ್ನು 20 ವರ್ಷದ ಹೇಮಾ ರಾಮಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಬೆಂಗಳೂರು ಮೂಲದ ಯುವತಿ ಹೇಮಾ, ಬಿ.ಕಾಂ ಫೈನಲ್ ಇಯರ್ ಓದುತ್ತಿದ್ದಳು. ಹೇಮಾಳನ್ನು ಅಖಿಲ್ ಎಂಬ ಬಾಗಲಕೋಟೆ ಮೂಲದ ಯುವಕ ಪ್ರೀತಿಸುತ್ತಿದ್ದ. ಇಬ್ಬರು ಒಬ್ಬರನ್ಜೊಬ್ಬರು ಲವ್ ಮಾಡಿದ್ದರು. ಆದರೆ, ಇವರ ಮದುವೆಗೆ ಪೋಷಕರ ನಿರಾಕರಣೆ ಹಿನ್ನೆಲೆಯಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಆದರೆ, ದುರಾದೃಷ್ಟವಶಾತ್ ಹೇಮಾ ಮೃತಪಟ್ಟಿದ್ದಾಳೆ. ಚಳಗೇರಿ ಬಳಿ ಇರುವ ಹೋಟೆಲ್ವೊಂದರ ಮುಂದೆ ಊಟಕ್ಕೆ ಬಸ್ ನಿಲ್ಲಿಸಿದಾಗ ಬಸ್ ಸಿಬ್ಬಂದಿಗೆ ಅನುಮಾನ ಬಂದಿದೆ. ವಿಷದ ವಾಸನೆ ಬಂದ ಹಿನ್ನೆಲೆ ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಖಿಲ್ ಸದ್ಯ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾನೆ. ರಾಣೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಲೆಯಲ್ಲಿ ಅಗ್ನಿ ಅವಘಡ: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ನಗರದ ಸುದೀಕ್ಷಾ ಇಂಟರ್ನ್ಯಾಷನಲ್ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ವಿದ್ಯಾರ್ಥಿಗೆ ಯಾವುದೇ ರೀತಿಯ ಹಾನಿ ಆಗಿಲ್ಲ. ಕಳೆದ ನಾಲ್ಕು ವರ್ಷಗಳಿಂದ ಈ ಶಾಲೆ ಕಾರ್ಯ ನಿರ್ವಹಿಸುತ್ತಿದ್ದು, ಎಂದಿನಂತೆ ಇಂದು ಬೆಳಗ್ಗೆಯಿಂದ ಎಲ್ಲಾ ತರಗತಿಗಳಲ್ಲಿ ಪಾಠಗಳು ನಡೆಯುತ್ತಿದ್ದವು. ಆದರೆ, ವಿದ್ಯುತ್ ಪೂರೈಕೆ ಸ್ಥಗಿತವಾಗಿದ್ದರಿಂದ ಶಾಲೆಯ ಜನರೇಟರ್ ಆನ್ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಜನರೇಟರ್ ಕೊಠಡಿಯಲ್ಲಿನ ವಿದ್ಯುತ್ ವೈರ್ಗಳಲ್ಲಿ ಮೊದಲು ಬೆಂಕಿ ಹೊತ್ತಿಕೊಂಡಿದೆ. ಹೊಗೆ ಮತ್ತು ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಶಿಕ್ಷಕರು ಹಾಗೂ ಸಿಬ್ಬಂದಿ ತಕ್ಷಣ 150ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕಟ್ಟಡದ ಹಿಂಬಾಗಿಲಿನಿಂದ ಸುರಕ್ಷಿತವಾಗಿ ಹೊರಗೆ ಕರೆದುಕೊಂಡು ಬರುವಲ್ಲಿ ಯಶಸ್ವಿಯಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
ಕಾರ್ ಟೈರ್ ಬ್ಲಾಸ್ಟ್ ಆಗಿ ನಡೆದ ಅಪಘಾತ: ಮಂಡ್ಯ ನಗರದ ಹೊರವಲಯದ ಚಿಕ್ಕಮಂಡ್ಯ ಬಳಿ ಬೆಂಗಳೂರು-ಮೈಸೂರು ಬೈಪಾಸ್ನಲ್ಲಿ ತೆರಳುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಅಪಘಾತ ಸಂಭವಿಸಿದೆ. ಕಾರಿನ ಟೈರ್ ಸ್ಫೋಟಗೊಂಡಿದ್ದರಿಂದ ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಶ್ರೀಕಾಂತ್, ಕೃಷ್ಣನ್, ಮಂಜುನಾಥ್, ಅರ್ಜುನ್, ಮೂರ್ತಿ ಎಂದು ಗುರುತಿಸಲಾಗಿದ್ದು, ಬೆಂಗಳೂರು ಮೂಲದವರಾಗಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಮಂಡ್ಯ ಸೆಂಟ್ರಲ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆದರು. ಪೊಲೀಸರು ಅಪಘಾತಗೊಂಡ ಕಾರ್ನ್ನು ದಶಪಥ ಹೆದ್ದಾರಿಯಿಂದ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವುಮಾಡಿಕೊಟ್ಟರು.
ಇದನ್ನೂ ಓದಿ: ಸಹಚರರಿಂದಲೇ ಹತ್ಯೆಯಾದ ರೌಡಿಶೀಟರ್; ಸಿಸಿಟಿವಿ ಕ್ಯಾಮರಾದಲ್ಲಿ ವಿಡಿಯೋ ಸೆರೆ