ETV Bharat / state

ನಿಂತಿದ್ದ ಕ್ಯಾಂಟರ್​​ಗೆ ಕ್ರೂಸರ್ ಡಿಕ್ಕಿ: ವಾಹನದಲ್ಲೇ​ ಸಿಲುಕಿ ವ್ಯಕ್ತಿಯ ಪರದಾಟ - ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಕ್ರೂಸರ್ ಡಿಕ್ಕಿ

ಹಾವೇರಿ ನಗರದ ಹೊರವಲಯದಲ್ಲಿರೋ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಕ್ರೂಸರ್​ನಲ್ಲಿ ಸಿಲುಕಿಕೊಂಡಿದ್ದ ಘಟನೆ ನಡೆದಿದೆ.

ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಕ್ರೂಸರ್ ಡಿಕ್ಕಿ
Cruiser vehicle collided with Tanker at Haveri
author img

By

Published : Feb 25, 2021, 8:02 AM IST

ಹಾವೇರಿ: ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಕ್ರೂಸರ್​ನಲ್ಲಿ ಸಿಲುಕಿಕೊಂಡಿದ್ದ ಘಟನೆ ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.

ಕ್ಯಾಂಟರ್ ವಾಹನಕ್ಕೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್​ ವಾಹನ ನಜ್ಜುಗುಜ್ಜಾಗಿದ್ದು, ಇದರಲ್ಲಿ ಸತೀಶ್​ ಕಾಸರಕರ (43) ಎಂಬ ವ್ಯಕ್ತಿಯ ಕಾಲು ಕ್ರೂಸರ್​ನಲ್ಲಿ ಸಿಲುಕಿ ಪರದಾಟ ನಡೆಸಿದ್ದರು. ಈ ವೇಳೆ 108 ಸಿಬ್ಬಂದಿ ಮತ್ತು ಪೊಲೀಸರು ಹರಸಾಹಸ ಪಟ್ಟು ಅವರನ್ನು ರಕ್ಷಿಸಿದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಓದಿ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೂವರ ದುರ್ಮರಣ

ಮಹಾರಾಷ್ಟ್ರ ಮೂಲದ ಕ್ರೂಸರ್ ವಾಹನ ಇದಾಗಿದ್ದು, ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಾಪಸ್ ಊರಿಗೆ ತೆರಳುತ್ತಿದ್ದ ವೇಳೆ ದುರ್ಘಟ‌ನೆ ಸಂಭವಿಸಿದೆ. ಈ ಸಂಬಂಧ ಹಾವೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.