ಹಾವೇರಿ: ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬರ ಕೈ ಮತ್ತು ಕಾಲು ಕಟ್ಟಾಗಿದೆ. ನಗರದ ರೈಲ್ವೆ ನಿಲ್ದಾಣದಲ್ಲಿ ಗುರುವಾರ ಈ ಘಟನೆ ನಡೆದಿದೆ.
ಕೈಕಾಲು ಕಳೆದುಕೊಂಡ ವ್ಯಕ್ತಿಯನ್ನ ಹುಬ್ಬಳ್ಳಿಯ ಗಣೇಶಪೇಟೆ ನಿವಾಸಿ 37 ವರ್ಷದ ಸಲೀಂ ಎಂದು ಗುರುತಿಸಲಾಗಿದೆ.
ಕುಡಿತದ ಮತ್ತಿನಲ್ಲಿದ್ದ ಸಲೀಂ ರೈಲ್ವೆ ಹಳಿ ದಾಟುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ಸಲೀಂ ಅವರನ್ನು ಸ್ಥಳೀಯರು ಜಿಲ್ಲಾಸ್ಪತ್ರೆಗೆ ಸೇರಿಸಿದ್ದಾರೆ. ಹಾವೇರಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.