ಹಾವೇರಿ: ಮನೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಹಾವೇರಿ ತಾಲೂಕಿನ ಗುತ್ತಲದಲ್ಲಿ ನಡೆದಿದೆ.
ಸಂಕಪ್ಪ ಹೂಗಾರ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು ಹೋಗಿದ್ದ ಇಬ್ಬರು ಗಾಯಗೊಂಡಿದ್ದಾರೆ. ಸುಭಾಶ್ ಮತ್ತು ಕಲ್ಲೇಶ ಹೂಗಾರ್ಗೆ ಸುಟ್ಟಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಮನೆ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಗುತ್ತಲ ಪಿಎಸ್ಐ ಶಂಕರಗೌಡ ಪಾಟೀಲ್ ಪರಿಶೀಲನೆ ನಡೆಸಿದರು.