ರಾಣೆಬೆನ್ನೂರು(ಹಾವೇರಿ): ರಾಣೆಬೆನ್ನೂರು ನಗರದಲ್ಲಿ ಕೊರೊನಾ ವೈರಸ್ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆ ಇಂದು ಜಿಲ್ಲಾಧಿಕಾರಿ ಕೃಷ್ಣಾ ಭಾಜಪೇಯಿ ರಾಣೆಬೆನ್ನೂರು ನಗರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಡೀ ಭಾರತವೇ ಲಾಕ್ ಡೌನ್ ಆದರೂ ಸಹ ರಾಣೆಬೆನ್ನೂರು ನಗರದಲ್ಲಿ ಜನಗಳ ಓಡಾಟ, ಮಾರುಕಟ್ಟೆಯಲ್ಲ, ಕಿರಾಣಿ ಅಂಗಡಿಗಳಲ್ಲಿ ವ್ಯಾಪಾರ ವ್ಯವಹಾರ ಯಥಾ ಪ್ರಕಾರವೇ ನಡೆಯುತ್ತಿದ್ದವು. ಅಷ್ಟೇ ಅಲ್ಲದೇ ಜನರೂ ಸಾಮಾಜಿಕ ಅಂತರ ಕಾದುಕೊಳ್ಳದೆ ಹತ್ತಿರ ಸೇರಿ ವ್ಯಾಪಾರ ವಹಿವಾಟು ನಡೆಸುತ್ತಿದ್ದರು. ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಕೃಷ್ಣಾ ಭಾಜಪೇಯಿ ಇಂದು ತಾವೇ ಖುದ್ದಾಗಿ ತರಕಾರಿ ಮಾರುಕಟ್ಟೆ, ಎಪಿಎಂಸಿ, ಎಂಜಿ ರಸ್ತೆ ಮತ್ತು ನಗರಸಭೆ ಕಾರ್ಯಾಲಯಕ್ಕೆ ಭೇಟಿ ನೀಡಿ ಕೊರೊನಾ ಹರಡದಂತೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಭೇಟಿ ವೇಳೆ ಲೋಪದೋಷಗಳ ಕಂಡು ಬಂದಲ್ಲೆಲ್ಲ ಹೆಚ್ಚಿನ ಜಾಗೃತಿ ವಹಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಅನಂತರ ಶಾಸಕ ಅರುಣಕುಮಾರ್ ಪೂಜಾರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿ ಕೊರೊನಾ ವೈರಸ್ ತಡೆಗಟ್ಟಲು ಅಧಿಕಾರಿಗಳಿಗೆ ಮಾರ್ಗಸೂಚಿ ನೀಡಿದರು.