ಹಾವೇರಿ: ಜಿಲ್ಲೆಯ ಸವಣೂರು ಪಟ್ಟಣದ ಇಸ್ಲಾಂಪುರ ಬಳಿಯ ಹೊಂಡದಲ್ಲಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿದೆ.
ದುಷ್ಕರ್ಮಿಗಳು ನಿನ್ನೆ ರಾತ್ರಿ ಶಿಶುವನ್ನ ಬಿಸಾಡಿ ಹೋಗಿರುವ ಶಂಕೆ ಇದ್ದು, ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಿಶುವನ್ನು ಅಮಾನವೀಯವಾಗಿ ಎಸೆದು ಹೋದ ದುಷ್ಕರ್ಮಿಗಳ ಕೃತ್ಯಕ್ಕೆ ಸ್ಥಳೀಯರು ಹಿಡಿಶಾಪ ಹಾಕಿದ್ದಾರೆ. ಘಟನೆ ಸಂಬಂಧ ಸವಣೂರು ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.