ಹಾವೇರಿ: ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಅಣಜಿ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನ 16 ವರ್ಷದ ನಾಗು ಲಮಾಣಿ ಎಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಬಾಲಕ ನೀರುಪಾಲಾಗಿದ್ದಾನೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕನ ಶವವನ್ನು ಕೆರೆಯಿಂದ ಹೊರಗೆ ತಗೆಯಲಾಗಿದ್ದು, ಸಂಬಂಧಿಕರ ಅಕ್ರಂದನ ಮುಗಿಲು ಮುಟ್ಟಿದೆ.