ಹಾವೇರಿ: ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ರಟ್ಟೀಹಳ್ಳಿ ತಾಲೂಕಿನ ಹಳ್ಳೂರು ಗ್ರಾಮಸ್ಥರು ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯ ಹೆದ್ದಾರಿ 26ರ ರಸ್ತೆ ಹೊಂಡದಂತಾಗಿದ್ದು, ಅದರ ಮೇಲೆ ಭತ್ತ ನಾಟಿ ಮಾಡುವ ಮೂಲಕ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರಸ್ತೆ ಸುಮಾರು 30 ವರ್ಷಗಳಿಂದ ದುರಸ್ತಿ ಭಾಗ್ಯ ಕಂಡಿಲ್ಲ. ಇಲ್ಲಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಈ ಕುರಿತಂತೆ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಪ್ರಯಾಣಿಸುವ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಶೀಘ್ರವೇ ರಸ್ತೆ ದುರಸ್ತಿ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.