ರಾಣೆಬೆನ್ನೂರು: ರಾಜ್ಯದಲ್ಲಿ ಕೊರೊನಾ ಭೀತಿ ಹೆಚ್ಚಾದ ಹಿನ್ನೆಲೆ ದೇವರಗುಡ್ಡದ ಮಾಲತೇಶ ದೇವಸ್ಥಾನಕ್ಕೆ 15 ದಿನ ಭಕ್ತರು ಬರದಂತೆ ಆಡಳಿತ ಮಂಡಳಿ ಮನವಿ ಮಾಡಿದೆ.
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿರುವ ಮಾಲತೇಶ ದೇವಸ್ಥಾನಕ್ಕೆ ಗುರುವಾರ, ಭಾನುವಾರ ಸೇರಿದಂತೆ ವಿಶೇಷ ದಿನಗಳಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಆದರೆ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸರ್ಕಾರದ ಆದೇಶಕ್ಕೆ ಬದ್ಧವಾಗಿರುವ ದೇವಾಲಯದ ಆಡಳಿತ ಮಂಡಳಿ ಈ ನಿರ್ಧಾರ ಕೈಗೊಂಡಿದೆ.
ಯಾವುದೇ ಕಾರ್ಯಕ್ರಮಗಳು ಇದ್ದರೂ 15 ದಿನಗಳ ನಂತರ ಭಕ್ತರು ದೇವಸ್ಥಾನಕ್ಕೆ ಬಂದು ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಮನವಿ ಮಾಡಿದ್ದಾರೆ.