ರಾಣೆಬೆನ್ನೂರು: ಮುಖಕ್ಕೆ ಮಾಸ್ಕ್ ಹಾಕಿಕೊಳ್ಳದೇ ಸಂಚಾರ ಮಾಡುತ್ತಿದ್ದ ಜನರಿಗೆ ಹಾಗೂ ವಾಹನ ಸವಾರರಿಗೆ ಮಾಸ್ಕ್ ವಿತರಣೆ ಮಾಡುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.
ನಗರದ ಜೈನ್ ಶ್ವೇತಾಂಬರ ಸಂಘದ ಯುವಕರು ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಪೊಲೀಸರ ಜತೆ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿದ್ದಾರೆ. ಜನರಿಗೆ ಹಾಗೂ ವಾಹನ ಸವಾರರಿಗೆ ಮಾಸ್ಕ್ ಹಾಕುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. ಅಲ್ಲದೇ ಕರ್ತವ್ಯ ನಿರತ ಪೊಲೀಸರ ಮತ್ತು ಆರೋಗ್ಯ ಸಿಬ್ಬಂದಿಗಳಿಗೆ ಊಟ, ಹಣ್ಣು ನೀಡುತ್ತಿದ್ದು, ಕೊರೊನಾ ತಡೆಗಟ್ಟಲು ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎನ್ನುತ್ತಾರೆ ಎಸ್ಪಿ ಟಿ.ವಿ.ಸುರೇಶ.