ಹಾವೇರಿ: ಭಾರತ-ಚೀನಾ ಗಡಿಯಲ್ಲಿ ನಡೆದ ಸಂಘರ್ಷದಲ್ಲಿ ಹುತಾತ್ಮರಾದ ಯೋಧರಿಗೆ ಜಿಲ್ಲಾ ಬಿಜೆಪಿ ಘಟಕದ ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಿದರು. ಇದೇ ವೇಳೆ ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಕರೆ ನೀಡಿದರು.
ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿಯ ಕಾರ್ಯಕರ್ತರು ಮತ್ತು ಮುಖಂಡರು, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ಇದೇ ವೇಳೆ ಚೀನಾ ವಸ್ತುಗಳಿಗೆ ಬೆಂಕಿ ಹಚ್ಚುವ ಮೂಲಕ ಪ್ರತಿಭಟನೆ ಸಹ ನಡೆಸಿದರು.
ಚೀನಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಚೀನಾದ ವಸ್ತುಗಳನ್ನು ಬಹಿಷ್ಕರಿಸಿ, ಸ್ವದೇಶಿ ವಸ್ತುಗಳನ್ನು ಬಳಸುವಂತೆ ಮನವಿ ಮಾಡಿದರು.