ಹಾವೇರಿ: ನಗರದಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ತಯಾರಿಸಿದ ಉಪ್ಪಿಟ್ಟಿನಲ್ಲಿ ಹುಳು ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯಾದ ಕೃಷ್ಣ ವಾಜಪೇಯ ಅವರು ಸೋಮವಾರ ಕ್ಯಾಂಟೀನ್‌ಗೆ ದಿಢೀರ್ ಭೇಟಿ ನೀಡಿದರು.
ಅಧಿಕಾರಿಗಳ ಜೊತೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಕ್ಯಾಂಟೀನ್‌ನಲ್ಲಿ ದಾಸ್ತಾನು ಸೇರಿದಂತೆ ವಿವಿಧ ಪರಿಕರಗಳನ್ನು ಪರಿಶೀಲಿಸಿದರು. ನಂತರ ತಾವೇ ಕ್ಯಾಂಟೀನ್‌ನಲ್ಲಿ ತಯಾರಿಸಿದ ಇಡ್ಲಿ, ವಡಾ ಸವಿದರು.
ಬಳಿಕ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಜೊತೆ ಕ್ಯಾಂಟೀನ್‌ನಲ್ಲಿ ತಯಾರಿಸುವ ಆಹಾರದ ಕುರಿತು ಚರ್ಚೆ ನಡೆಸಿದರು. ಇದೇ ವೇಳೆ ಶುಚಿತ್ವ ಕಾಪಾಡುವಂತೆ ಸಿಬ್ಬಂದಿಗೆ ಸೂಚಿಸಿದರು.