ಹಾವೇರಿ: ಜಿಲ್ಲಾ ಪೊಲೀಸ್ ಇಲಾಖೆಯ ಪ್ರಸ್ತುತ ವರ್ಷದ ಕ್ರೀಡಾಕೂಟಕ್ಕೆ ಇಂದು ತೆರೆ ಬಿದ್ದಿದೆ.
ನಗರದ ಕೊಳ್ಳಿ ಕಾಲೇಜ್ ಮೈದಾನದಲ್ಲಿ ನಡೆದ ಪೊಲೀಸ್ ಇಲಾಖೆ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಪಶ್ಚಿಮವಲಯದ ಐಜಿಪಿ ಅಮೃತಪೌಲ್ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ಕ್ರೀಡಾಕುಟದಲ್ಲಿ ಹಲವು ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದು, ಕ್ರೀಡಾಕೂಟದಲ್ಲಿ ವಿಜೇತರಾದ ಪೊಲೀಸ್ ಸಿಬ್ಬಂದಿಗೆ ಅಮೃತಪೌಲ್ ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ಹಾವೇರಿ ಎಸ್ಪಿ ಕೆ.ಜಿ.ದೇವರಾಜ್, ಎಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.