ಹಾವೇರಿ: ಜಿಲ್ಲೆಯ ಶಿಗ್ಗಾಂವ್ ತಾಲೂಕಿನಲ್ಲಿ 250 ಬೆಡ್ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿ ಮೆಡಿಕಲ್ ಕಾಲೇಜು ನಿರ್ಮಾಣ ವೇಗವಾಗಿ ನಡೆಯುತ್ತಿದೆ, ಈಗಾಗಲೇ ಪ್ರವೇಶಾತಿ ಪ್ರಾರಂಭ ಮಾಡಲಾಗಿದೆ. ಫೆಬ್ರವರಿ-ಮಾರ್ಚ್ ಅಂತ್ಯದೊಳಗೆ ಹೊಸ ಕಟ್ಟಡದಲ್ಲಿ ಕಾಲೇಜು ಪ್ರಾರಂಭಿಸುವುದಾಗಿ ತಿಳಿಸಿದರು.
ಮುಂದಿನ ತಿಂಗಳು ಹುಬ್ಬಳಿಯಲ್ಲಿ ಹೃದಯರೋಗಕ್ಕೆ ಸಂಬಂಧಪಟ್ಟಂತೆ ಆಸ್ಪತ್ರೆ ನಿರ್ಮಿಸಲು ಅಡಿಗಲ್ಲು ಹಾಕಿ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ. ಇದೇ ವರ್ಷ ಬೆಳಗಾವಿಯಲ್ಲಿ ಕ್ಯಾನ್ಸರ್ಗೆ ಸಂಬಂಧಿಸಿದಂತೆ ಆಸ್ಪತ್ರೆಯನ್ನು ನಿರ್ಮಾಣ ಮಾಡುತ್ತೇವೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಇದನ್ನೂ ಓದಿ: ಬೀದರ್ ಉತ್ಸವಕ್ಕೆ ಸಿಎಂ ಬಸವರಾಜ ಬೊಮ್ಮಾಯಿಗೆ ಆಹ್ವಾನ