ರಾಣೇಬೆನ್ನೂರು : ಕೊರೊನಾ ಸೋಂಕು ತಗುಲಿದ ವ್ಯಕ್ತಿಗೆ ವೈದ್ಯರು ಆಸ್ಪತ್ರೆಯಲ್ಲಿ ಬೆಡ್ ಇಲ್ಲ. ಹಾಗಾಗಿ ಮನೆಯಲ್ಲಿ ವಿಶ್ರಾಂತಿ ಪಡೆಯಿರಿ ಎಂದು ಹೇಳಿದ್ದಾರೆ ಎಂದು ಆರೋಪಿಸಲಾಗಿದೆ.
ಮಾನ್ವಿ ಕಂಪನಿ ನಗರದ ಮಹಿಳೆಯೊರ್ವಳಿಗೆ ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಗಿಗೆ ಕೋವಿಡ್ ಪರೀಕ್ಷೆ ಒಳಪಡಿಲಾಗಿದ್ದು, ವರದಿಯಲ್ಲಿ ಸೋಂಕು ತಗುಲಿರುವುದು ಕಂಡು ಬಂದಿದೆ. ಇದರಿಂದ ಆಸ್ಪತ್ರೆ ವೈದ್ಯರು ಇಲ್ಲಿ ಬೆಡ್ಗಳು ಖಾಲಿ ಇಲ್ಲ. ಮನೆಯಲ್ಲಿ ವಿಶ್ರಾಂತಿ ರೆಸ್ಟ್ ಮಾಡಿಸಿ ಎಂದು ರೋಗಿಯ ಮಗನಿಗೆ ಹೇಳಿದ್ದಾರೆ.
ಇದರಿಂದ ವಿಚಲಿತಗೊಂಡ ಯುವಕ ಆಸ್ಪತ್ರೆ ಸಿಬ್ಬಂದಿ ಮತ್ತು ಜನಪ್ರತಿನಿಧಿಗಳ ಬಗ್ಗೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾನೆ. ರಾಜ್ಯದಲ್ಲಿ ಕೊರೊನಾ ಚಿಕಿತ್ಸೆಗಾಗಿ ಖರ್ಚು ಮಾಡಲಾಗುತ್ತದೆ. ಆದರೆ ವೈದ್ಯರು ಕೊರೊನಾ ವ್ಯಕ್ತಿಯನ್ನು ಅಡ್ಮಿಟ್ ಮಾಡಿಕೊಂಡು ಚಿಕಿತ್ಸೆ ನೀಡುವ ಬದಲು ಮನೆಯಲ್ಲಿ ಇರಿ ಎಂದು ಹೇಳಿಕೆ ನೀಡಿರುವುದು ಖಂಡಿಸಿ, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.