ಹಾವೇರಿ: ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ ಹತ್ತು ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಆರ್ಶಿಯಾಬಾನು ಮೃತ ಬಾಲಕಿ. ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಬೆಳಿಗ್ಗೆ ಆಸ್ಪತ್ರೆಯ ವೈದ್ಯ ಹರೀಶ್ ಚಿಕಿತ್ಸೆ ನೀಡಿದ್ದರು. ಆದ್ರೆ ಸಂಜೆಯಾದ್ರೂ ಬಾಲಕಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿರಲಿಲ್ಲ.
ಸಂಜೆ ವೇಳೆಗೆ ಬಾಲಕಿಯನ್ನ ಮತ್ತೆ ಆಸ್ಪತ್ರೆಗೆ ಕರೆತಂದಾಗ ವೈದ್ಯರ ಕೊರತೆಯಿಂದ ಚಿಕಿತ್ಸೆಯನ್ನು ನೀಡಿದಿರುವುದರಿಂದ ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗ್ತಿದೆ. ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ಧ ಮೃತ ಬಾಲಕಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘
ಈ ಘಟನೆಯ ಕುರಿತು ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.