ಹಾವೇರಿ: ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪುರಸಭೆ ವತಿಯಿಂದ ಔಷಧ ಸಿಂಪಡಣೆ ಮಾಡಲಾಯಿತು.
ಶಾಸಕ ಶ್ರೀನಿವಾಸ್ ಔಷಧ ಸಿಂಪಡಣೆಗೆ ಅವಶ್ಯವಾಗಿರುವ ಪೋರ್ಟೇಬಲ್ ಸ್ಪ್ರೇಯರ್ ವಿತರಿಸಿ, ಔಷಧ ಸಿಂಪಡಣೆಯ ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಹಾವೇರಿ ಜಿಪಂ ಅಧ್ಯಕ್ಷ ಬಸವರಾಜ ದೇಸಾಯಿ, ಜಿಪಂ ಸದಸ್ಯ ರಮೇಶ ದುಗ್ಗತ್ತಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಹಾದಿಮನಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರೇಮಾ ಪಾಟೀಲ್ ಸೇರಿದಂತೆ ಮತ್ತಿತರ ರಾಜಕೀಯ ನಾಯಕರು ಉಪಸ್ಥಿತರಿದ್ದರು.