ರಾಣೆಬೆನ್ನೂರು: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಉಕ್ಕುಂದ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ಗುಡ್ಡನಗೌಡ ನಾಗನಗೌಡ ಕರೇಗೌಡ್ರ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ದಿನನಿತ್ಯ ಮದ್ಯ ಸೇವಿಸುತ್ತಿದ್ದ ಈತ ಶನಿವಾರವೂ ಕಂಠಪೂರ್ತಿ ಕುಡಿದಿದ್ದಾನೆ. ಈ ನಡುವೆ ಅಮಲಿನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.