ಹಾವೇರಿ: ವಿದ್ಯುತ್ ತಂತಿ ತಗುಲಿ ಎಂಟು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಜೇಕಿನಗಟ್ಟಿ ತಾಂಡಾದಲ್ಲಿ ನಡೆದಿದೆ.
ಮೃತ ಬಾಲಕನನ್ನು ದಿಗಂತ್ ನಾಯಕ್ ಎಂದು ಗುರುತಿಸಲಾಗಿದೆ. ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಬಾಲಕನ ಸಾವಿಗೆ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಮೃತ ಬಾಲಕನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಶಿಗ್ಗಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.