ಹಾವೇರಿ: ನಾಳೆ ಅಯೋಧ್ಯೆಯಲ್ಲಿ ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮ ಇರುವ ಹಿನ್ನೆಲೆ ಜಿಲ್ಲೆಯಾದ್ಯಂತ ಕಲಂ 144 ಅನ್ವಯ ನಿಷೇದಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಮಾಡಿದ್ದಾರೆ.
ಇಂದು ರಾತ್ರಿ ಒಂಭತ್ತು ಗಂಟೆಯಿಂದ ನಾಳೆ ರಾತ್ರಿ 12 ಗಂಟೆಯವರೆಗೆ ನಿಷೇದಾಜ್ಞೆ ಜಾರಿಯಲ್ಲಿರಲಿದೆ. ಜೊತೆಗೆ ಇಂದು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.
ಜಿಲ್ಲೆಯಲ್ಲಿನ ಎಲ್ಲ ಹೋಲ್ ಸೇಲ್ ಮತ್ತು ರಿಟೇಲ್ ಮದ್ಯ ಮಾರಾಟದ ಲೈಸನ್ಸ್ ಹೊಂದಿದವರು ಅಂಗಡಿ ಬಂದ್ ಮಾಡುವಂತೆ ಆದೇಶ ನೀಡಲಾಗಿದೆ. ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡೋ ದೃಷ್ಟಿಯಿಂದ ಜಿಲ್ಲಾಧಿಕಾರಿ ಈ ಆದೇಶ ನೀಡಿದ್ದಾರೆ.