ETV Bharat / state

ಲ್ಯಾಪ್​ಟಾಪ್​ ವಿತರಣೆಗೆ ಆಗ್ರಹಿಸಿ ಇಂಜಿನಿಯರಿಂಗ್​ ವಿದ್ಯಾರ್ಥಿಗಳಿಂದ ಪ್ರತಿಭಟನೆ - ಇಂಜಿನಿಯರಿಂಗ್​ ವಿದ್ಯಾರ್ಥಿಗಳ ಪ್ರತಿಭಟನೆ

ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್​ಟಾಪ್​ಗಳನ್ನು ವಿತರಣೆ ಮಾಡುತ್ತಿದ್ದು, ನಮಗೂ ಲ್ಯಾಪ್​ಟಾಪ್ ವಿತರಿಸುವಂತೆ ಆಗ್ರಹಿಸಿ ನಗರದಲ್ಲಿಂದು ಇಂಜಿನಿಯರಿಂಗ್ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಇಂಜಿನಿಯರಿಂಗ್​ ವಿದ್ಯಾರ್ಥಿಗಳ ಪ್ರತಿಭಟನೆ
Engineering students protest
author img

By

Published : Mar 4, 2020, 5:06 PM IST

ಹಾವೇರಿ: ವಿದ್ಯಾಭ್ಯಾಸ ನಡೆಸಲು ನಮಗೆ ಲ್ಯಾಪ್​ಟಾಪ್ ಅವಶ್ಯವಿದ್ದು, ಸರ್ಕಾರ ನಮಗೂ ಲ್ಯಾಪ್​ಟಾಪ್ ವಿತರಿಸಬೇಕೆಂದು ಆಗ್ರಹಿಸಿ ನಗರದಲ್ಲಿಂದು ಇಂಜಿನಿಯರಿಂಗ್ ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಇಂಜಿನಿಯರಿಂಗ್​ ವಿದ್ಯಾರ್ಥಿಗಳ ಪ್ರತಿಭಟನೆ

ಎಐಡಿಎಸ್‌ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ನಗರದ ಹೊರವಲಯದಲ್ಲಿರುವ ಇಂಜಿನಿಯರಿಂಗ್ ಕಾಲೇಜಿನಿಂದ ದೇವಗಿರಿಯ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಪದವಿ ತರಗತಿಯ ವಿದ್ಯಾರ್ಥಿಗಳಿಗೆ ಲ್ಯಾಪ್​ಟಾಪ್ ವಿತರಿಸುತ್ತಿದೆ. ಆದರೆ ಲ್ಯಾಪ್​ಟಾಪ್ ಅತ್ಯವಶ್ಯವಾಗಿರುವ ಇಂಜಿನಿಯರಿಂಗ್​​ ವಿದ್ಯಾರ್ಥಿಗಳನ್ನ ಕಡೆಗಣಿಸಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿರುವ 12 ಸರ್ಕಾರಿ ಇಂಜಿನಿಯರಿಂಗ್​ ಕಾಲೇಜುಗಳಲ್ಲಿ ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರ ಈ ಕೂಡಲೇ ಇಂಜಿನಿಯರಿಂಗ್​ ವಿದ್ಯಾರ್ಥಿಗಳಿಗೆ ಲ್ಯಾಪ್​ಟಾಪ್ ವಿತರಿಸುವಂತೆ ಆಗ್ರಹಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.