ಹಾವೇರಿ: ಜಿಲ್ಲೆಗೆ ಮೆಗಾ ಮಿಲ್ಕ್ ಡೈರಿ ಸ್ಥಾಪಿಸುವ ಕುರಿತು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಹಾನಗಲ್ ತಾಲೂಕಿನ ಬಾಳಂಬೀಡದಲ್ಲಿ ನಡೆದ ಏತನೀರಾವರಿ ಯೋಜನೆಗಳ ಅಡಿಗಲ್ಲು ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಇದೇ ಪ್ರಥಮ ಬಾರಿಗೆ 15-20 ವರ್ಷಗಳಲ್ಲಿನ ರೈತರ ಪಿಎಲ್ಡಿ, ಕೆಸಿಸಿ, ಸಹಕಾರಿ ಸಂಘಗಳ ಸಾಲದ ಮೇಲಿನ ಬಡ್ಡಿ, ಸುಸ್ತಿ ಬಡ್ಡಿ ಮನ್ನಾ ಮಾಡಿದೆ ಎಂದರು.
ರೈತರಿಗೆ ಅನುಕೂಲವಾಗಲಿ ಎಂದು ಬಡ್ಡಿ ಮನ್ನಾ ಮಾಡಲಾಗುತ್ತಿದ್ದು, ಅವರು ತೃಪ್ತಿಯಿಂದ ಇರಬೇಕು. ರೈತರು ಮಾ.31ರೊಳಗೆ ಸಾಲ ಮರುಪಾವತಿ ಮಾಡುವ ಮೂಲಕ ಸಹಕಾರ ನೀಡುವಂತೆ ಸಿ.ಎಂ. ರೈತರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ.ಪಾಟೀಲ್ ಮತ್ತು ಸಂಸದ ಶಿವಕುಮಾರ್ ಉದಾಸಿ ಮತ್ತು ಅಧಿಕಾರಿಗಳು ಇದ್ದರು.