ಹಾವೇರಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ದೇಸಾಯಿಗಲ್ಲಿಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನ 16 ವರ್ಷದ ವೈಷ್ಣವಿ ರಿತ್ತಿ ಎಂದು ಗುರುತಿಸಲಾಗಿದೆ. ಗಣಿತ ವಿಷಯದಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿದ್ಯಾರ್ಥಿನಿಯ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಹಾವೇರಿ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.